Vijayapura

ನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ: ಶಾಸಕ ಯತ್ನಾಳ್
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ ಎಂದರು.

Guarantee scheme: 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಬೇಕು'- ಸಚಿವ ಎಂಬಿ ಪಾಟಿಲ್
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿದ್ದು, ಶ್ರೀಮಂತರು ಇವುಗಳ ಪ್ರಯೋಜನ ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕರೆ ನೀಡಿದ್ದಾರೆ.

ವಿಜಯನಗರ: ಮನೆ ಕಟ್ಟಲು ಅನುಮತಿ ನೀಡಿಲ್ಲ ಎಂದು ನೊಂದು ರೈತ ಆತ್ಮಹತ್ಯೆಗೆ ಯತ್ನ
ಮನೆ ನಿರ್ಮಾಣಕ್ಕೆ ಇ-ಸ್ವತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಲಾಗಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ: ಖಾಸಗಿ ತರಬೇತಿ ವಿಮಾನ ಅಪಘಾತ; ಪ್ರಾಣಾಪಾಯದಿಂದ ಇಬ್ಬರು ಪಾರು! Video
ಮಂಗಳೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಎರಡು ಆಸನಗಳ ತರಬೇತಿ ವಿಮಾನವೊಂದು ತೆರೆದ ಗದ್ದೆಯಲ್ಲಿ ಪತನಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯಪುರ: ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ, 20ಕ್ಕೂ ಹೆಚ್ಚು ವಾಹನ ಭಸ್ಮ; Video
ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ.

ವಿಜಯಪುರದಲ್ಲಿ ಶೀಘ್ರದಲ್ಲೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ.

ವಿಜಯಪುರ: ಪ್ರತಿಭಟನೆ ತಡೆಯಲು ಮುಂದಾದ PSI, ಪೇದೆಗೆ ಸ್ವಾಮೀಜಿ ಕಪಾಳಮೋಕ್ಷ, Video!
ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ.

ವಿಜಯಪುರ: ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕೃಷ್ಣ ಪ್ಯಾಲೇಸ್ ಹೋಟೆಲ್; Video
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಾಸ್ವಿಯಾಗಿದ್ದಾರೆ.

ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಡಿಸೆಂಬರ್ 24ರಂದು ವಿಶೇಷ ರೈಲು ಸೇವೆ; ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ರೈಲು ಸಂಖ್ಯೆ 07379 ಹುಬ್ಬಳ್ಳಿಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ಮೂಲಕ ರಾತ್ರಿ 8.30 ಕ್ಕೆ ಯಶವಂತಪುರ ತಲುಪಲಿದೆ.

