Vijayendra

ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಬಿಜೆಪಿ ಸಮರ: ವಿಧಾನಸೌಧ ಮುತ್ತಿಗೆಗೆ ಯತ್ನ, ವಿಜಯೇಂದ್ರ ಸೇರಿ ಹಲವರು ಖಾಕಿ ವಶಕ್ಕೆ
ಹಗರಣ ಹಾಗೂ ಅಕ್ರಮ ಪ್ರಕರಣಗಳ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೈಫಲ್ಯಗಳ ಮರೆಮಾಚಲು ಸರ್ಕಾರ ಉದ್ಯೋಗ ಮೀಸಲಾತಿ ವಿಚಾರ ಪ್ರಸ್ತಾಪಿಸಿದೆ: BJP ಆರೋಪ
ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ?

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ: ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ; ಇಂದು ಸಿಎಂ ಮನೆಗೆ ಮುತ್ತಿಗೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ಜುಲೈ ಮೊದಲ ವಾರದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ವಿಧಾನಸಭಾ ಉಪಚುನಾವಣೆ, MLC ಸ್ಥಾನಕ್ಕೆ ಅಭ್ಯರ್ಥಿಗಳ ಆಯ್ಕೆ ಸಾಧ್ಯತೆ
ಮೂವರು ಶಾಸಕರು ಸಂಸದರಾಗಿ ಆಯ್ಕೆಯಾದ ನಂತರ ತೆರವಾಗಿರುವ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಶೀಘ್ರದಲ್ಲೇ ನಡೆಯಲಿದೆ.

ಸಿಎಂ-ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವಿಜಯೇಂದ್ರ ಭಾಷಾ ವೈಖರಿಗೆ ಹೈಕೋರ್ಟ್ ಕಿಡಿ
ಚುನಾವಣೆ ಸಂದರ್ಭದಲ್ಲಿ ಮನುಷ್ಯನ ನಾಲಿಗೆ ಮತ್ತು ಮೆದುಳು ನಡುವಿನ ಸೇತುವೆ ಕುಸಿಯಬಾರದು. ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೆಟ್ಟ ಭಾಷೆ ಬಳಸಬಾರದು ಎಂದು ಹೈಕೋರ್ಟ್ ಮೌಖಿಕವಾಗಿ ಶುಕ್ರವಾರ ಹೇಳಿತು.

ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ: 2 ಲಕ್ಷ ರೂ. ನೆರವು, ಮೃತನ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸರ್ಕಾರಕ್ಕೆ ಆಗ್ರಹ
ಚಿತ್ರದುರ್ಗದ ವಿಆರ್‌ಎಸ್ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿದ್ದು, ಪಕ್ಷದ ವತಿಯಿಂದ ರೂ.2 ಲಕ್ಷ ನೆರವು ನೀಡಿ, ಮೃತ ವ್ಯಕ್ತಿಯ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.

Contractor Suicide: ಸಹಾಯಕ ಅಧಿಕಾರಿಗಳು, ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸುತ್ತಿರುವ ಸರ್ಕಾರ; ಬಿಜೆಪಿ ಕಿಡಿ
ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಆಡಳಿತದಲ್ಲಿ ಅಮಾಯಕ ಹೆಣ್ಣುಮಕ್ಕಳಿಗೆ ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ, ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಮೀಸಲಾತಿ ಕುರಿತು ವೀಡಿಯೋ ಪೋಸ್ಟ್: ಜೆಪಿ ನಡ್ಡಾ, ಅಮಿತ್ ಮಾಳವೀಯಾ, ವಿಜಯೇಂದ್ರ ವಿರುದ್ಧ FIR!
ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳ ವೀಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ...

ಚುನಾವಣೆ ಮುಗಿದ ಮೇಲೆ 'ಕೈ' ನಾಯಕರಿಗೆ ಚೊಂಬು ಹಿಡಿದು ಓಡುವ ಪರಿಸ್ಥಿತಿ ಬರಲಿದೆ: ಕಾಂಗ್ರೆಸ್'ಗೆ ವಿಜಯೇಂದ್ರ ತಿರುಗೇಟು
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕರಿಗೆ ಚೊಂಬು ಹಿಡಿದು ಓಡುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಿರುಗೇಟು ನೀಡಿದ್ದಾರೆ.

