Vijayendra

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ‘ರಾಮರಾಜ್ಯ’ಕ್ಕೆ ನಾಂದಿ ಹಾಡುವ ಬೆಳವಣಿಗೆ: ವಿಜಯೇಂದ್ರ
ಪ್ರಧಾನಿ ಮೋದಿಯವರ ಆಶಯದಂತೆ ರಾಮರಾಜ್ಯ ಶೀಘ್ರದಲ್ಲೇ ನನಸಾಗಲಿದೆ, ಇದು ಕೇವಲ ದೀಪಾವಳಿ ಅಲ್ಲ, ಅಯೋಧ್ಯೆ ದೀಪಾವಳಿ ಎಂದು ವಿಜಯೇಂದ್ರ ಹೇಳಿದ್ದಾರೆ.

ಜನವರಿ 31 ರಿಂದ ಮಾರ್ಚ್ 15 ರವರೆಗೆ ರಾಜ್ಯದಿಂದ 35 ಸಾವಿರ ಭಕ್ತರು ಅಯೋಧ್ಯೆಗೆ!
ಜನವರಿ 22ರ ನಂತರ ಕರ್ನಾಟಕದ ರಾಮಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಜ್ಯದಿಂದ 35,000 ರಾಮಭಕ್ತರು ಜನವರಿ 31 ರಿಂದ ಮಾರ್ಚ್ 25 ರವರೆಗೆ ಸುಮಾರು 25 ರೈಲುಗಳಲ್ಲಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ಹೇಳಿದರು.

ಮತ್ತೊಮ್ಮೆ ಮೋದಿ: ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚಾಲನೆ
2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ನರೇಂದ್ರ ಮೋದಿಜೀ ಅವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಮಂಡ್ಯ ಲೋಕಸಭೆ ಜೆಡಿಎಸ್ ಪಾಲು? ಬಿಜೆಪಿ ನಿರ್ಧಾರಕ್ಕೆ ಸುಮಲತಾ ಕಂಗಾಲು: ಶೀಘ್ರವೇ ವಿಜಯೇಂದ್ರ ಭೇಟಿ; ಸಂಸದೆಗೆ ಕಾಂಗ್ರೆಸ್ ಗಾಳ!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತನ್ನ ಮೈತ್ರಿಕೂಟದ ಪಾಲುದಾರ ಜೆಡಿಎಸ್‌ಗೆ ನೀಡಲು ಬಿಜೆಪಿ ನಿರ್ಧರಿಸಿದೆ ಎಂಬ ಬೆಳವಣಿಗೆಯಿಂದ ಆತಂಕಗೊಂಡಿರುವ ಸಂಸದೆ ಸುಮಲತಾ ಅಂಬರೀಶ್ ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆ: ಶೀಘ್ರಗತಿಯಲ್ಲಿ ಅಭ್ಯರ್ಥಿಗಳ ಘೋಷಿಸಿ; ಹೈಕಮಾಂಡ್'ಗೆ ರಾಜ್ಯ ಬಿಜೆಪಿ ಆಗ್ರಹ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಅಭ್ಯರ್ಥಿಗಳನ್ನು ಶೀಘ್ರಗತಿಯಲ್ಲಿ ಆಯ್ಕ ಮಾಡುವಂತೆ ಹೈಕಮಾಂಡ್'ಗೆ ರಾಜ್ಯ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಲಿದೆ: ವಿಜಯೇಂದ್ರ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಲಿದ್ದು, ರಾಜಕೀಯ ಬದಲಾವಣೆಯಾಗಲಿದೆ. ಮೋದಿ ಅವರ ಜನಪ್ರಿಯತೆ ವಿಶ್ವವ್ಯಾಪಿಯಾಗಿದ್ದು, ಇದನ್ನು ಮತವಾಗಿ ಪರಿವರ್ತನೆ ಮಾಡುವ ಕಾರ್ಯದ ಜವಾಬ್ದಾರಿ ಕಾರ್ಯಕರ್ತರಲ್ಲಿ ಇದ್ದು, ಯಶಸ್ವಿಯಾಗಿ ನಿಭಾಯಿಸಬೇಕು

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ
ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ; ಹಬ್ಬ, ಹರಿದಿನಗಳನ್ನು ಬದಿಗಿಡಿ, ಒಗ್ಗಟ್ಟಿನಿಂದ ಕೆಲಸ ಮಾಡಿ: ವಿಜಯೇಂದ್ರ
ನರೇಂದ್ರ ಮೋದಿಜೀ ಅವರು ವಿಶ್ರಾಂತಿ ಪಡೆಯದೆ ಕಳೆದ ಒಂಬತ್ತೂವರೆ ವರ್ಷಗಳಿಂದ ನಿರಂತರವಾಗಿ ದೇಶಸೇವೆ ಮಾಡುತ್ತಿದ್ದಾರೋ ಅದೇ ಮಾದರಿಯಲ್ಲಿ ಒಗ್ಗಟ್ಟಾಗಿ ಒಂದಾಗಿ ಕೆಲಸ ಮಾಡಬೇಕು.

ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಿ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ: ವಿಜಯೇಂದ್ರ
2027ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಪರಿವರ್ತಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿದ್ದು, ಇದಕ್ಕಾಗಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಹೇಳಿದರು.

