Vijayendra

JDS ಜೊತೆಗಿನ ಚುನಾವಣಾ ಮೈತ್ರಿ ತೀರ್ಮಾನ ಹೈಕಮಾಂಡ್'ಗೆ ಬಿಟ್ಟದ್ದು: ಬಿ.ವೈ ವಿಜಯೇಂದ್ರ
ಬಿಜೆಪಿ ಕೇಂದ್ರ ನಾಯಕತ್ವವು ಜೆಡಿಎಸ್ ಜೊತೆ ಕೈಜೋಡಿಸಲು ತೀರ್ಮಾನಿಸಿದೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮುಂದಾಗಿದ್ದಾರೆ.

ರಾಜ್ಯದ ಯುವ ಉದ್ಯೋಗಾಕಾಂಕ್ಷಿಗಳ ತಾಳ್ಮೆ ಪರೀಕ್ಷಿಸಬೇಡಿ: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ
2023 ರಲ್ಲಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಸರ್ಕಾರದಲ್ಲಿ 2,500 ಹುದ್ದೆಗಳಿದ್ದು ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದರು.

ರೈತ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲ: BJP
ಕಬ್ಬು ರೈತರ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಮೆಕ್ಕೆಜೋಳ ಬೆಳೆಗಾರರ ಕುಂದುಕೊರತೆಗಳನ್ನು ಕೇಳುವವರೇ ಇಲ್ಲ. ರೈತರು ತಮ್ಮ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಮಧ್ಯವರ್ತಿಗಳಿಗೆ ಮಾರಾಟ ಮಾಡುವಂತೆ ಒತ್ತಾಯಿಸಲಾಗುತ್ತಿದೆ.

ಸರ್ಕಾರ ನಡೆಸಲಾಗದಿದ್ದರೆ, ವಿಧಾನಸಭೆ ವಿಸರ್ಜಿಸಿ: ಕಾಂಗ್ರೆಸ್'ಗೆ ವಿಜಯೇಂದ್ರ ಆಗ್ರಹ
ಆಡಳಿತ ನಡೆಸಲು ಸಾಧ್ಯವಿದ್ದರೆ ನಡೆಸಿ, ಇದೇ ರೀತಿ ಕಿತ್ತಾಟ ಮಾಡಿಕೊಂಡು ದೆಹಲಿಯಲ್ಲಿ ನಾಲ್ಕು ದಿನ, ಬೆಂಗಳೂರಿನಲ್ಲಿ 3 ದಿನ ಇರುವುದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ.

ಬಿಹಾರದಲ್ಲಿ NDA ಗೆಲುವು ಬೆನ್ನಲ್ಲೇ BJP ರಾಜ್ಯಾಧ್ಯಕ್ಷ ಕುರಿತು ಚರ್ಚೆ ಶುರು: ನಾಯಕತ್ವ ಸ್ಥಾನದಲ್ಲಿ ನಾನೇ ಮುಂದುವರೆಯುತ್ತೇನೆ; ವಿಜಯೇಂದ್ರ ವಿಶ್ವಾಸ
ನನಗೂ ವಿಶ್ವಾಸ ಇದೆ, ಹೈಕಮಾಂಡ್ನಿಂದ ಸ್ಪಷ್ಟತೆ ಸಿಗುತ್ತೆ ಎಂಬ ವಿಶ್ವಾಸ ಇದೆ. ನನಗಂತೂ ಸ್ಪಷ್ಟತೆ ಸಿಕ್ಕಿದೆ. ರಾಜ್ಯಾಧ್ಯಕ್ಷ ಆಗಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಪರೋಕ್ಷವಾಗಿ ತಾವೇ ಮುಂದುವರೆಯುವ ಬಗ್ಗೆ ಸುಳಿವು ನೀಡಿದರು.

ಚುನಾವಣಾ ವ್ಯವಸ್ಥೆ ಅಮಾನ್ಯಗೊಳಿಸುವ ವಿಪಕ್ಷಗಳ ಪ್ರಯತ್ನಗಳನ್ನು ಮತದಾರರು ತಿರಸ್ಕರಿಸಿದ್ದಾರೆ: BJP
ಬಿಹಾರ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಜಯ, ದೇಶದ ಹೆಮ್ಮೆಯ ಪ್ರಧಾನಿ ಮೋದಿ ಅವರ ಸದೃಢ ನಾಯಕತ್ವದ ಕೊರಳನ್ನು ಅಲಂಕರಿಸಿದ ಪ್ರಜಾಪ್ರಭುತ್ವದ ವಿಜಯದ ಹಾರವಾಗಿ ವಿಜೃಂಭಿಸಿದೆ.

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP-JDS ಕಿಡಿ
ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುಧೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ.

ಖುರ್ಚಿ ಕಾಳಗದಲ್ಲಿರುವ ರಾಜ್ಯ ಸರ್ಕಾರಕ್ಕೆ ರೈತರ ಸಮಸ್ಯೆ ಕೇಳಲು ಪುರುಸೊತ್ತಿಲ್ಲ: ಬಿ.ವೈ ವಿಜಯೇಂದ್ರ
ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡುವಂತೆ ಗುರ್ಲಾಪುರ ಬಳಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು.

ಪರಿಶಿಷ್ಟ ಪಂಗಡಗಳು ಕಾಂಗ್ರೆಸ್ ಗೆ ಕೇವಲ ಮತಬ್ಯಾಂಕ್ ಮಾತ್ರ: ವಿಜಯೇಂದ್ರ
ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯನ್ನು 'ಜನಜಾತಿಯ ಗೌರವ್ ದಿವಸ್' (ಬುಡಕಟ್ಟು ಹೆಮ್ಮೆಯ ದಿನ) ಎಂದು ಘೋಷಿಸುವ ಮೋದಿಯವರ ನಿರ್ಧಾರವನ್ನು ಶ್ಲಾಘಿಸಿದರು

