Vikram Kirloskar

ಟೊಯೋಟ ಕಿರ್ಲೋಸ್ಕರ್ ಮೋಟಾರು ಉಪಾಧ್ಯಕ್ಷ ಹೃದಯಾಘಾತದಿಂದ ಸಾವು, ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ
ಟೊಯೋಟ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಟೊಯೊಟೊ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ: ಸಿಎಂ ಸಂತಾಪ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ನ (Toyota Kirloskar Motor Company) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ನಿನ್ನೆ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

