ರಾಜ್ಯಶಿವಮೊಗ್ಗ: ರಾಜ್ಯಕ್ಕೆ ಬೆಳಕು ನೀಡಲು ಜಮೀನು, ಮನೆಗಳನ್ನು ತ್ಯಾಗ ಮಾಡಿದ್ದ ಹಳ್ಳಿಗರಿಗೆ 60 ವರ್ಷಗಳ ಬಳಿಕ ವಿದ್ಯುತ್
ಶಿವಮೊಗ್ಗ ತಾಲ್ಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಶೆಟ್ಟಿಹಳ್ಳಿ ಹಾಗೂ ಚಿತ್ರಶೆಟ್ಟಿಹಳ್ಳಿ ಗ್ರಾಮಗಳಿಗೆ ಹೈಕೋರ್ಟ್ ನಿರ್ದೇಶನದಂತೆ ಭೂಗತ ಕೇಬಲ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ ಮುಂದಾಗಿದೆ.