Vinay Kulkarni

4 ವರ್ಷಗಳ ಬಳಿಕ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ!
ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್ ಅನುಮತಿ ಮೇರೆಗೆ ಮಂಗಳವಾರ ಧಾರವಾಡಕ್ಕೆ ಪ್ರವೇಶಿಸಿ ತಮ್ಮ ಮತಹಕ್ಕು ಚಲಾಯಿಸಿದರು.

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಹಿನ್ನಡೆ, ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ
ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ವಿಚಾರಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಕಾಂಗ್ರೆಸ್ ಶಾಸಕ ವಿನಯ್ ವಿನಯ್ ಆರ್ ಕುಲಕರ್ಣಿ ಅವರಿಗೆ ಹಿನ್ನಡೆಯಾಗಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ...

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ವಿರುದ್ಧದ ದೋಷಾರೋಪಣೆಯಲ್ಲಿ ದೋಷಗಳಿವೆ; ನ್ಯಾಯಾಲಯದಲ್ಲಿ ವಕೀಲರ ವಾದ
ಧಾರವಾಡ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿರುವಲ್ಲಿ ಸಾಕಷ್ಟು ದೋಷಗಳಿವೆ ಎಂದು ಧಾರವಾಡ ಶಾಸಕ ವಿನಯ್ ಕುಲಕರ್ಣಿ ಪರ ವಕೀಲರು ಹೈಕೋರ್ಟ್ ಮುಂದೆ ವಾದಿಸಿದ್ದಾರೆ.

ಬಿ-ರಿಪೋರ್ಟ್ ತಿರಸ್ಕೃತ: ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣ
ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್ ನಕಾರ, ಅರ್ಜಿ ವಜಾ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 2016ರ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ವಿನಯ್ ಕುಲಕರ್ಣಿ ‘ಓಲೈಸಲು’ ಸವದತ್ತಿಯಲ್ಲಿ ಕಾರ್ಯಕ್ರಮ; ಶಿಕ್ಷಕರ ದಿನಾಚರಣೆಗೆ ರಜೆ?
ಮಾಜಿ ಸಚಿವ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರನ್ನು ‘ಓಲೈಸಲು’ ಸವದತ್ತಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಗಿದೆ ಮತ್ತು ಈ ಕಾರ್ಯಕ್ರಮದಲ್ಲಿ ಶಿಕ್ಷಕರು ಭಾಗವಹಿಸುವುದಕ್ಕಾಗಿ...

ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ: ಕಾಂಗ್ರೆಸ್ ಶಾಸಕ
ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಎರಡೂವರೆ ವರ್ಷಗಳ ನಂತರ ಪುನಾರಚನೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು...

ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದರೆ ರೈತರಿಗೆ ಅನುಕೂಲವಾಗಲಿದೆ: ವಿನಯ್ ಕುಲಕರ್ಣಿ
ರಾಜ್ಯದಲ್ಲಿ ವಿವಾದಾತ್ಮಕ ಗೋಹತ್ಯೆ ವಿರೋಧಿ ಮಸೂದೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು, ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತಿದ್ದುಪಡಿ ಮಾಡುವಂತೆ ಭಾನುವಾರ ಕೋರಿದ್ದಾರೆ.

