Voilence

ಹಿಂಸಾಚಾರ ಸೃಷ್ಟಿಯಾಗುವ ಆತಂಕ: ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಮಣಿಪುರ ಪೊಲೀಸರ ತಡೆ
ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.

ಮಣಿಪುರಕ್ಕೆ ಸಹಾಯ ಮಾಡಲು ನಮಗೆ ನೆರವಾಗಿ: ಮಹಿಳಾ ಪ್ರತಿಭಟನಾಕಾರರಿಗೆ ಸೇನೆ ಮನವಿ
ಹಿಂಸಾಚಾರಪೀಡಿತ ಮಣಿಪುರದಲ್ಲಿ ಶಾಂತಿ ಹಾಗೂ ಸಹಜತೆ ಮರಳಲು ನಡೆಸಲಾಗುತ್ತಿರುವ ಯತ್ನಗಳಿಗೆ ಸಹಕಾರ ನೀಡುವಂತೆ ಜನತೆಗೆ ಭಾರತೀಯ ಸೇನೆ ಮನವಿ ಮಾಡಿಕೊಂಡಿದೆ.

ಅಕ್ರಮವಾಗಿ ದರ್ಗಾ ನಿರ್ಮಾಣ: ನೋಟಿಸ್ ನೀಡಲು ಬಂದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ, ಓರ್ವ ಸಾವು
ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್ ನ ಜುನಾಗಢ್ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿದೆ.

ಅಮಿತ್ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಪೊಲೀಸರು ಸೇರಿ ಐವರ ಸಾವು, ಹಲವರಿಗೆ ಗಾಯ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿಗೂ ಮುನ್ನ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರದಲ್ಲಿ ಐವರು ಜನರು ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ನನ್ನ ರಾಜ್ಯ ಮಣಿಪುರ ಹೊತ್ತಿ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ: ಕೇಂದ್ರ ಸರ್ಕಾರಕ್ಕೆ ಮಹಿಳಾ ಬಾಕ್ಸರ್ ಮೇರಿ ಕೋಮ್ ಮನವಿ
ನನ್ನ ರಾಜ್ಯ ಮಣಿಪುರ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದ್ದು, ದಯವಿಟ್ಟು ಸಹಾಯ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.

ಕೇರಳ: ಕ್ರಿಸ್ ಮಸ್ ಆಚರಣೆ ವೇಳೆ ಗಲಾಟೆ; ಪೊಲೀಸರ ಮೇಲೆ ದಾಳಿ, ಜೀಪಿಗೆ ಬೆಂಕಿ, 150 ಕಾರ್ಖಾನೆ ಕಾರ್ಮಿಕರ ಬಂಧನ
ಎರ್ನಾಕುಲಂ ಗ್ರಾಮಾಂತರ ಪೊಲೀಸರು ಭಾನುವಾರ ಮುಂಜಾನೆ ಕಿಝಕ್ಕಂಬಲಂನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಶಾನ್ಯ ರಾಜ್ಯಗಳು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಿಂದ ಬಂದಿರುವ ಖಾಸಗಿ ಗಾರ್ಮೆಂಟ್ಸ್ ಕಾರ್ಖಾನೆಯ (ಕಿಟೆಕ್ಸ್ ಗಾರ್ಮೆಂಟ್ಸ್) 150 ಕ್ಕೂ ಹೆಚ್ಚು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಿಲ್ಲದ ಸಂಘರ್ಷ; ಗುಂಡಿನ ದಾಳಿಯಲ್ಲಿ ಓರ್ವ ಸಾವು
ಪ್ಯಾಲೆಸ್ತೀನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಮತ್ತೆ ಮುಂದುವರೆದಿದ್ದು, ಶನಿವಾರ ಇಸ್ರೇಲ್ ನಡೆಸಿದ ಗುಂಡಿನ ದಾಳಿಯಲ್ಲಿ ಪ್ಯಾಲೆಸ್ತೀನ್ ಮೂಲದ ವ್ಯಕ್ತಿ ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಹಿಂಸಾಚಾರಕ್ಕೆ ತಿರುಗಿದ ವಿಸ್ಟ್ರಾನ್ ಕಂಪನಿಯ ಕಾರ್ಮಿಕರ ಮುಷ್ಕರ; ವಾಹನಗಳಿಗೆ ಬೆಂಕಿ, ಲಾಠಿಪ್ರಹಾರ
ಇತ್ತೀಚೆಗೆ ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆರಂಭಿಸಲಾಗಿದ್ದ ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರ ಮುಷ್ಕರ ಹಿಂಸಾಚಾರಕ್ಕೆ ತಿರುಗಿದ್ದು, ಕಂಪನಿಯ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಡಿಜೆ ಹಳ್ಳಿ ಗಲಭೆ ಪ್ರಕರಣ: 2 ಕೇಸ್ ಎನ್'ಐಎಗೆ ವಹಿಸಲು ಸರ್ಕಾರ ನಿರ್ಧಾರ
ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಕಾನೂನುಬಾಹಿರ ಅಪರಾಧ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಿಸಲಾಗಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಎನ್ಐಎ ಹೈಕೋರ್ಟ್'ಗೆ ಶುಕ್ರವಾರ ಮಾಹಿತಿ ನೀಡಿದೆ.

