Voilence

ಬೆಂಗಳೂರು ಗಲಭೆ ಪ್ರಕರಣ: ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರಗೊಂಡ ವಾಕ್ಸಮರ
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ವಾಕ್ಸಮರ ತೀವ್ರಗೊಂಡಿದೆ.

ಗಲಭೆಕೋರರು ನನ್ನ ಕ್ಷೇತ್ರಕ್ಕೆ ಸೇರಿದವರಾಗಿರಲಿಲ್ಲ: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಮಂಗಳವಾರ ರಾತ್ರಿ ಏಕಾಏಕಿ 3-4 ಸಾವಿರ ಜನರು ಮನೆಯ ಮೇಲೆ ದಾಳಿ ನಡೆಸಿ, ನನ್ನ ಹಾಗೂ ತಮ್ಮನ ಮನೆಯನ್ನು ಸುಟ್ಟು ಹಾಕಿದ್ದಾರೆ. ಒಡವೆ, ಹಣ ಎತ್ತಿಕೊಂಡು ಹೋಗಿದ್ದಾರೆ. ಇವರಾರು ನನ್ನ ಕ್ಷೇತ್ರದ ಜನರಲಾಗಿರಲಿಲ್ಲ. ರಾಡ್ ಹಾಗೂ ಪೆಟ್ರೋಲ್ ನ್ನು ಹಿಡಿದು ಹೊರಗಿನಿಂದ ಬಂದಿದ್ದರು.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಆಗಸ್ಟ್ 15ರವರೆಗೂ ಸೆಕ್ಷನ್ 144 ಜಾರಿ; 17 ಪ್ರಮುಖ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು
ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಆಗಸ್ಟ್ 15ರ ಬೆಳಿಗ್ಗೆ 6 ಗಂಟೆಯವರೆಗೂ ಮುಂದುವರೆಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ತಿಳಿಸಿದ್ದಾರೆ.

ಬೆಂಗಳೂರು: ಗಲಭೆಪೀಡಿತ ಪ್ರದೇಶ ಈಗ ಶಾಂತ; ಸುತ್ತಮುತ್ತಲ ಸ್ಥಳಗಳಲ್ಲಿ ಅಘೋಷಿತ ಬಂದ್
ಮಂಗಳವಾರ ರಾತ್ರಿ ಹಿಂಸಾಚಾರ ಉಂಟಾಗಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೊಂಡಿದ್ದ ರಾಜಧಾನಿ ಬೆಂಗಳೂರಿನ ಪೂರ್ವಭಾಗದಲ್ಲಿ ಇದೀಗ ಶಾಂತಿ ನೆಲೆಸಿದೆ.

ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್
ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು ಹಿಂಸಾಚಾರ: ಪ್ರಚೋದನಾಕಾರಿ ಪೋಸ್ಟ್ ಮೂಲ ಪತ್ತೆ ತನಿಖೆಗೆ ದಿಗ್ವಿಜಯ್ ಸಿಂಗ್ ಆಗ್ರಹ
ಬೆಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣವಾದ ಪ್ರಚೋದನಾಕಾರಿ ಪೋಸ್ಟ್'ನ ಮೂಲ ಪತ್ತೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಬುಧವಾರ ತನಿಖೆಗೆ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶ: ಮೊರಾದಾಬಾದ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 5 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, 73 ಪೊಲೀಸರು ಕ್ವಾರಂಟೈನ್'ಗೆ
ಉತ್ತರಪ್ರದೇಶದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ನಡುವೆ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮೊರಾಬಾದ್ ನಲ್ಲಿ ನಡೆದ ಹಲ್ಲೆ ಘಟನೆ ಬಳಿಕ ಆಘಾತಕಾರಿ ವಿಷಯವೊಂದು ಇದೀಗ ಬಹಿರಂಗಗೊಂಡಿದೆ.

ದೆಹಲಿ ರಕ್ತಪಾತ: ಕೇಜ್ರಿವಾಲ್ ನಿವಾಸದ ಮುಂದೆಯೂ ಭುಗಿಲೆದ್ದ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ದೆಹಲಿ ಹೊತ್ತು ಉರಿಯುತ್ತಿದ್ದು, ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಮುಂದೆಯೂ ಪ್ರತಿಭಟನೆ ಭುಗಿಲೆದ್ದಿದೆ ಎಂದು ವರದಿಗಳು ತಿಳಿಸಿವೆ.

ದೆಹಲಿ ಹಿಂಸಾಚಾರ: 20 ಕ್ಕೇರಿದ ಸಾವಿನ ಸಂಖ್ಯೆ, ಪರಿಸ್ಥಿತಿ ಕುರಿತು ಸಂಪುಟ, ಪ್ರಧಾನಿಗೆ ವರದಿ ಸಲ್ಲಿಸಲಿರುವ ದೋವಲ್
ಪೌರತ್ವ ತಿದ್ದುಪಡಿ ಪರ-ವಿರೋಧವಾಗಿ ಈಶಾನ್ಯ ದೆಹಲಿಯಲ್ಲಿ ಶನಿವಾರ ಸಣ್ಣ ಪ್ರಮಾಧಲ್ಲಿ ಆರಂಭವಾಗಿ, ಭಾನುವಾರ-ಸೋಮವಾರಗಳಂದು ಹಿಂಸಾಚಾರ ರೂಪ ಪಡೆದುಕೊಂಡಿದ್ದ ಪ್ರತಿಭಟನೆ, ಮಂಗಳವಾರ ರಕ್ತಪಾತಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೂ ಜಫ್ರಾಬಾದ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಹಿಂಸಾಚಾರ ನಡೆಸಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ.

