ರಾಜ್ಯಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯಸರ್ಕಾರದಿಂದ ಅಧಿಕೃತ ಆದೇಶ
ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ನಿಗಮದ ಚಟುವಟಿಕೆಗಳಿಗೆ 500 ಕೋಟಿ ರೂ. ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ವಿ. ಅಕ್ಕಮಹಾದೇವಿ ಆದೇಶದಲ್ಲಿ ತಿಳಿಸಿದ್ದಾರೆ.