vote

ವಿಧಾನಸಭಾ ಚುನಾವಣೆ 2023: ಹಕ್ಕು ಚಲಾಯಿಸಿದ ಘಟಾನುಘಟಿ ನಾಯಕರು!
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ನಡೆಯುತ್ತಿದ್ದು, ಅಭ್ಯರ್ಥಿಗಳಿಂದ ಹಿಡಿದು ಕಾರ್ಯಕರ್ತರವರೆಗೂ ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಡಗರದಿಂದ ಪಾಲ್ಗೊಳ್ಳುತ್ತಿದ್ದಾರೆ.

ಚುನಾವಣೆಯಲ್ಲಿ ಕ್ರಿಮಿನಲ್ ಗಳು ಸ್ಪರ್ಧಿಸಬಹುದಾದರೆ, ಕೈದಿಗಳಿಗೆ ಮತದಾನದ ಹಕ್ಕು ಏಕಿಲ್ಲ?
ಜೈಲಿನಲ್ಲಿರುವ ಕೈದಿಗಳಿಗೆ ಅವರ ಹಕ್ಕು ಚಲಾಯಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ನಾಯಕರು ಜೈಲಿನಲ್ಲಿದ್ದರೂ ಸ್ಪರ್ಧಿಸಲು ಅವಕಾಶ ನೀಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾನ ಪ್ರಕ್ರಿಯೆ ಆರಂಭ, ಮನೆಯಿಂದಲೇ ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗ ದಿನಾಂಕ ಘೋಷಣೆಯಾಗಿದ್ದರೂ ಚುನಾವಣಾ ಆಯೋಗ ಹಿರಿಯ ನಾಗರೀಕರು, ಅಂಗವಿಕಲರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಹಿರಿಯ ನಟಿ ಲೀಲಾವತಿಯವರು ಶನಿವಾರ ಮತದಾನ ಮಾಡಿದ್ದಾರೆ.

ಚುನಾವಣೆಯಲ್ಲಿ ಯುವ ಮತದಾರರ ಪಾತ್ರ ಮುಖ್ಯ: ಬಿಬಿಎಂಪಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ
ಇಂದಿನ ಯುವಪೀಳಿಗಿಯೇ ಭಾರತದ ಭವಿಷ್ಯದ ಹರಿಕಾರರು ಎಂಬುದ ಜನಜನಿತ. ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಯುವಜನತೆ ಮತಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ ಆವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು.

ವಿಧಾನಸಭಾ ಚುನಾವಣೆ: ನಗರದಲ್ಲಿ ಈ ಬಾರಿ 1.35 ಲಕ್ಷ ಮೊದಲ ಬಾರಿಯ ಮತದಾರರು!
ರಾಜ್ಯ ವಿಧಾನಸಭಾ ಚುನಾವಣೆ ಮೇ.10 ರಂದು ನಡೆಯಲಿದ್ದು, ಮೇ.13 ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿಯ ಮತದಾನ ಪ್ರಮಾಣವನ್ನು ಏರಿಕೆ ಮಾಡಲು ಬಿಬಿಎಂಪಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ.

ಒಳ ಮೀಸಲಾತಿ ಕಿಚ್ಚು: ಬಿಜೆಪಿಗೆ ಮತ ಹಾಕದಂತೆ ಭಕ್ತರಿಗೆ ಸೂಚಿಸಿದ ಶ್ರೀಗಳ ವಿರುದ್ಧ ಪ್ರಕರಣ ದಾಖಲು
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಲಂಬಾಣಿ ಸಮುದಾಯದ ಶ್ರೀಗಳೊಬ್ಬರ ವಿರುದ್ಧ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ಚುನಾವಣಾ ಆಯೋಗದಿಂದ ಮತದಾನದ ಬಗ್ಗೆ ಹೀಗೊಂದು ಕ್ಯೂಟ್ ಪ್ರೇಮಪತ್ರ....
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ. ಮುಂದಿನ ತಿಂಗಳು ಮೇ 10ರಂದು ಒಂದೇ ಹಂತದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಅಪಾರ್ಟ್‌ಮೆಂಟ್ ನಿವಾಸಿಗಳ ಭೇಟಿ ಮಾಡಿದ ಸಚಿವ ಅಶ್ವತ್ಥ್ ನಾರಾಯಣ್, ಬಿಜೆಪಿಗೆ ಮತ ಹಾಕುವಂತೆ ಮನವಿ
ಸಲಾರ್‌ಪುರಿಯಾ, ಎಂಬಸಿ, ಬ್ರಿಗೇಡ್ ರೀಜೆನ್ಸಿ ಮತ್ತು ಶಶಿಕಿರಣ್ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳನ್ನು ಭೇಟಿ ಮಾಡಿದ ಉನ್ನತ ಶಿಕ್ಷಣ ಸಚಿವ ಹಾಗೂ ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಪಕ್ಷಕ್ಕೆ ನಾನು ಸೀಮಿತ ಅಲ್ಲ, ಯಾರ ಪರವಾಗಿ ಟಿಕೆಟ್ ಕೇಳುವುದೂ ಇಲ್ಲ: ಕಿಚ್ಚ ಸುದೀಪ್ ಸ್ಪಷ್ಟನೆ
ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಯಾರ ಪರವಾಗಿ ಚುನಾವಣೆಯಲ್ಲಿ ಟಿಕೆಟ್ ಕೇಳುವುದೂ ಇಲ್ಲ, ಟಿಕೆಟ್ ಕೇಳುವಷ್ಟು ದೊಡ್ಡವನು ನಾನಲ್ಲ, ಅಬ್ಬಬ್ಬಾ ಅಂದರೆ ಸಿನಿಮಾ ನೋಡಲು ಟಿಕೆಟ್ ಕೊಡಿಸಬಹುದು ಅಷ್ಟೆ, ಸಿಎಂ ಬೊಮ್ಮಾಯಿಯವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದು ಸತ್ಯ ಎಂದು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ.

