voting

ಗುಜರಾತ್ ವಿಧಾನಸಭಾ ಚುನಾವಣೆ: ನಾಳೆ 2ನೇ ಹಂತದ ಮತದಾನ, ಸಕಲ ಸಿದ್ಧತೆ
ಗುಜರಾತ್ ವಿಧಾನಸಭೆಯ 93 ಸ್ಥಾನಗಳಿಗೆ ನಾಳೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ಸುಗಮ ಮತದಾನಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.

ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: ಯಾರೆಲ್ಲಾ ಪ್ರಮುಖ ಅಭ್ಯರ್ಥಿಗಳು ಇಲ್ಲಿದೆ ಮಾಹಿತಿ
ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಗುರುವಾರ ಆರಂಭವಾಗಿದೆ. ಇಂದು ಮೊದಲ ಹಂತದ ಮತದಾನದಲ್ಲಿ ಸೌರಾಷ್ಟ್ರ-ಕಚ್ ಮತ್ತು ರಾಜ್ಯದ ದಕ್ಷಿಣ ಭಾಗದ 19 ಜಿಲ್ಲೆಗಳ 89 ಕ್ಷೇತ್ರಗಳಲ್ಲಿ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆ 2022: ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭ, 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ 2022ರ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದ್ದು, ಈ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಗುಜರಾತ್ ವಿಧಾನಸಭಾ ಚುನಾವಣೆ 2022: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮೊದಲ ಹಂತದ ಮತದಾನ
ಗುಜರಾತ್ ವಿಧಾನಸಬಾ ಚುನಾವಣೆ 2022ರ ಬಹಿರಂಗ ಪ್ರಚಾರ ಮಂಗಳವಾರಕ್ಕೆ ಮುಕ್ತಾಯಗೊಂಡಿದ್ದು, ಡಿಸೆಂಬರ್ 1 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.

ಹಿಮಾಚಲ ಪ್ರದೇಶ ಚುನಾವಣೆ 2022: ಶೇ. 65.92ರಷ್ಟು ಮತದಾನ!
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದ್ದು ಅಂತಿಮವಾಗಿ ಶೇಕಡ 65.92ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಹಿಮಾಚಲ ಪ್ರದೇಶ ಚುನಾವಣೆ: ಬೆಳಗ್ಗೆ 11 ಗಂಟೆಯವರೆಗೆ ಶೇ.17.98 ಮತದಾನ
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಮುಂದುವರಿಯುತ್ತಿದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಇಂದು ಬೆಳಗ್ಗೆ 11 ಗಂಟೆಯವರೆಗೆ ಮೊದಲ ಮೂರು ಗಂಟೆಗಳಲ್ಲಿ ಶೇ 17.98ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಹಿಮಾಚಲ ಪ್ರದೇಶ ಚುನಾವಣೆ ಮತದಾನ ಮಂದಗತಿಯಲ್ಲಿ ಆರಂಭ: ಬೆಳಗ್ಗೆ 9 ಗಂಟೆಯವರೆಗೆ ಶೇ.5.02 ಮತದಾನ
ವಿದ್ಯುನ್ಮಾನ ಮತಯಂತ್ರಗಳು(EVM) ಪರಿಶೀಲಿಸಲು ಅಧಿಕಾರಿಗಳು ಎಲ್ಲಾ ಮತಗಟ್ಟೆಗಳಲ್ಲಿ ಅಣಕು ಮತದಾನ ನಡೆಸಿದ ನಂತರ ನಿರ್ಣಾಯಕ ಹಿಮಾಚಲ ಪ್ರದೇಶ ಚುನಾವಣೆಯ ಮತದಾನ ಶನಿವಾರ ಬೆಳಗ್ಗೆ 8 ಗಂಟೆಗೆ ನಿಧಾನಗತಿಯಲ್ಲಿ ಪ್ರಾರಂಭವಾಯಿತು.

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: 68 ಕ್ಷೇತ್ರಗಳಿಗೆ ಮತದಾನ ಆರಂಭ, 412 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಪರ್ವತ ರಾಜ್ಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ: ಮತದಾನ ಆರಂಭ
ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

