VTU

ರಾಜ್ಯಪಾಲರ ನಿರ್ದೇಶನ ಪಾಲಿಸಿದ VTU; ಘಟಿಕೋತ್ಸವದಲ್ಲಿ ಪೂರ್ಣ ‘ವಂದೇ ಮಾತರಂ’ ಗಾಯನ
ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸರ್ಕಾರ ಸೆಪ್ಟೆಂಬರ್ 8ರಂದು ಹೊರಡಿಸಿದ್ದ ಆದೇಶದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

VTU ಖಜಾನೆ ಮೇಲೆ ಸರ್ಕಾರದ ಕಣ್ಣು; UVCE ಅಭಿವೃದ್ಧಿಗೆ ₹250 ಕೋಟಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಪತ್ರ
ವರ್ಷಗಳ ಕಾನೂನು ಸಮರದ ಬಳಿಕ IT ಇಲಾಖೆಯಿಂದ ಸಿಕ್ಕಿದ್ದ ಬರೋಬ್ಬರಿ 610 ಕೋಟಿ ರೂಪಾಯಿ ಮೇಲೆ ಈಗ ರಾಜ್ಯ ಸರ್ಕಾರದ ಕಣ್ಣು ಬಿದ್ದಿದ್ದು. ಬೆಂಗಳೂರಿನ ಯುವಿಸಿಸಿಇ ಕಾಲೇಜಿನ ಅಭಿವೃದ್ಧಿಗಾಗಿ 250 ಕೋಟಿ ರೂಪಾಯಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಳಗಾವಿ: ಪ್ರಸ್ತುತ ಶೈಕ್ಷಣಿಕ ವರ್ಷದಿಂದ VTU ಪಠ್ಯಕ್ರಮ ಬದಲಾವಣೆ- ಕುಲಪತಿ ಪ್ರೊ. ವಿದ್ಯಾಶಂಕರ್
ವಿಟಿಯು ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು, ಐಟಿ-ಬಿಟಿ ಕಂಪನಿಗಳು, 2,000 ಕ್ಕೂ ಹೆಚ್ಚು ಶಿಕ್ಷಕರು ಮತ್ತು 3,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಇನ್‌ಪುಟ್‌ಗಳನ್ನು ಪಡೆದ ನಂತರ ಪಠ್ಯಕ್ರಮವನ್ನು ಸಿದ್ಧಪಡಿಸಿದೆ.

ಫೈನಲ್ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ 3 ಗಂಟೆಗಳಲ್ಲಿ ಫಲಿತಾಂಶ ಪ್ರಕಟಿಸಿದ VTU
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (VTU) ಅಂತಿಮ ಸೆಮಿಸ್ಟರ್ ಬಿಇ/ಬಿಟೆಕ್/ಬಿಆರ್ಕ್/ಬಿಪ್ಲಾನ್ ಕೋರ್ಸ್‌ಗಳ ಫಲಿತಾಂಶವನ್ನು ಕಳೆದ ಗುರುವಾರ ಪರೀಕ್ಷೆ ನಡೆದ ಮೂರು ಗಂಟೆಯೊಳಗೆ ಪ್ರಕಟಿಸುವ ಮೂಲಕ ದಾಖಲೆ ನಿರ್ಮಿಸಿದೆ.

ಫೆ.24ರಂದು ವಿಟಿಯು ಘಟಿಕೋತ್ಸವ: 18 ಚಿನ್ನದ ಪದಕ ಪಡೆದ ಬೆಂಗಳೂರಿನ ಮುರಳಿ ಎಸ್
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಫೆ.24ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ಸಾಧನೆ ತೋರಿದ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ.

ವಿಟಿಯು ಕುಲಪತಿ ಸ್ಥಾನಕ್ಕೆ ಮೂವರ ಹೆಸರು ಅಂತಿಮ; ಉನ್ನತ ಹುದ್ದೆ ಪಡೆಯಲು ಭಾರಿ ಲಾಬಿ!
ಮೂಲಗಳ ಪ್ರಕಾರ, ಉನ್ನತ ಹುದ್ದೆಯನ್ನು ಹಿಡಿಯಲು ಅಭ್ಯರ್ಥಿಗಳು ರಾಜ್ಯದ ಪ್ರಮುಖ ರಾಜಕಾರಣಿಗಳಲ್ಲದೆ ಕೆಲವು ಆರ್‌ಎಸ್‌ಎಸ್ ನಾಯಕರ ಬೆನ್ನು ಬಿದ್ದಿದ್ದು, ಒತ್ತಡ ಹೇರುತ್ತಿದ್ದಾರೆ.

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅವ್ಯವಹಾರ; ಲೋಕಾಯುಕ್ತಕ್ಕೆ ದೂರು ದಾಖಲು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿ, ಉಪಕುಲಪತಿ ಡಾ.ಕರಿಸಿದ್ದಪ್ಪ ಮತ್ತು ಕುಲಸಚಿವ ಪ್ರೊ.ಆನಂದ ದೇಶಪಾಂಡೆ ವಿರುದ್ಧ ಹೈಕೋರ್ಟ್‌ನ ಇಬ್ಬರು ವಕೀಲರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ನೂತನ ಉಪ ಕುಲಪತಿ ನೇಮಕ: ಶೋಧನಾ ಸಮಿತಿ ರಚನೆ
ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ನೂತನ ಉಪ ಕುಲಪತಿ ಆಯ್ಕೆಗೆ ನಾಲ್ವರು ಸದಸ್ಯರ ಶೋಧನಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಮೂವರು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲು ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಪಾರ ತಾವರ್ ಚಂದ್ ಗೆಹ್ಲೊಟ್ ಅವರಿಗೆ ಸಲ್ಲಿಸಲಿದೆ.

'ಸೂಪರ್-30': ಪ್ರತಿ ಜಿಲ್ಲೆಯಲ್ಲೂ ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜು!
ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ ಒಂದು ಮಾದರಿ ಇಂಜಿನಿಯರಿಂಗ್ ಕಾಲೇಜನ್ನು ಉತ್ಕೃಷ್ಟ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ (VTU) ಪ್ರೊ. ಕರಿಸಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

