Wall Collapse

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಗೋಡೆ ಕುಸಿತ: ಓರ್ವ ಸಾವು, ಹಲವರಿಗೆ ಗಾಯ
ರಾಷ್ಟ್ರ ರಾಜಧಾನಿಯ ಮೆಟ್ರೋ ನಿಲ್ದಾಣವೊಂದರ ಬಳಿ ಗೋಡೆ ಕುಸಿತದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಉತ್ತರ ಪ್ರದೇಶ: ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಗೋಡೆ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಉತ್ತರ ಪ್ರದೇಶದ ಘೋಸಿಯಲ್ಲಿ ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಗೋಡೆ ಕುಸಿದಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಚೆನ್ನೈನಲ್ಲಿ ಭಾರಿ ಮಳೆ: ಗೋಡೆ ಕುಸಿದು ಇಬ್ಬರು ಸಾವು, ನಿರ್ಮಾಣ ಹಂತದ ಕಟ್ಟಡದಲ್ಲಿ ಸಿಲುಕಿದ 10 ಮಂದಿ!
ಚೆನ್ನೈನ ಪೂರ್ವ ಕರಾವಳಿ ರಸ್ತೆಯ ಕಾನತ್ತೂರಿನಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಇಬ್ಬರು ಸಾವಿಗೀಡಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀದರ್: ಗೋಡೆ ಕುಸಿದು 8 ವರ್ಷದ ಬಾಲಕಿ ಸಾವು
ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ
ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ.

ದಾವಣಗೆರೆಯಲ್ಲಿ ನಿರಂತರ ಮಳೆ: ಮನೆಗೋಡೆ ಕುಸಿದು 1 ವರ್ಷದ ಹೆಣ್ಣು ಮಗು ಸಾವು
ಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಸ್ಫೂರ್ತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ಹಳೇ ಕಟ್ಟಡ ನೆಲಸಮ ವೇಳೆ ಗೋಡೆ ಕುಸಿತ; ಇಬ್ಬರು ಕಾರ್ಮಿಕರ ದುರ್ಮರಣ
ನಗರದ ಮಹಾಲಕ್ಷ್ಮೀ ಲೇಔಟ್ನ 10ನೇ ಕ್ರಾಸ್ನಲ್ಲಿ ಹಳೇ ಕಟ್ಟಡ ನೆಲಸಮ ಮಾಡುವ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ.

ಭಾರೀ ಮಳೆಗೆ ಮನೆ ಗೋಡೆ ಕುಸಿತ: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಮಗು ಸೇರಿ ಮೂವರು ಸಾವು
ದೀಪಾವಳಿ ಹಬ್ಬ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಅನಾಹುತ ಮುಂದುವರಿದಿದೆ.

ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆ: ಲಕ್ನೊದಲ್ಲಿ ಮನೆ ಗೋಡೆ ಕುಸಿದು ಕನಿಷ್ಠ 9 ಮಂದಿ ಸಾವು, ಸಿಎಂ ಪರಿಹಾರ ಘೋಷಣೆ
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳು ಜಲಾವೃತವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಲಕ್ನೋದಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಆಡಳಿತ ಘೋಷಿಸಿದೆ.

