Water crisis

ದೆಹಲಿಯಲ್ಲಿ ನೀರಿನ ಸಮಸ್ಯೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕೆಂದು ಎಎಪಿ ಶಾಸಕರ ಆಗ್ರಹ
ನೀರಿನ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಶಾಸಕರು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಟ್ಯಾಂಕರ್ ಮಾಫಿಯಾ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಪ್ರಸನ್ನ ಬಿ ವರಾಳೆ ಅವರ ರಜಾಕಾಲದ ಪೀಠವು, ಟ್ಯಾಂಕರ್ ಮಾಫಿಯಾವನ್ನು ನಿಭಾಯಿಸಲು ದೆಹಲಿ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಈ ವಿಷಯದಲ್ಲಿ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರಿಗೆ ಸೂಚಿಸುತ್ತೇವೆ ಎಂದಿದೆ.

ದೆಹಲಿ ನೀರಿನ ಬಿಕ್ಕಟ್ಟು: ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದೆಹಲಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಬಿಜೆಪಿ ಮುಂದು; ಯಮುನಾದಿಂದ ಸರಬರಾಜು ಸ್ಥಗಿತ: ಅತಿಶಿ
ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಹೊಸ ಸಂಚು ರೂಪಿಸಿದ್ದು, ಅದರ ಹರಿಯಾಣ ಸರ್ಕಾರದ ಮೂಲಕ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ನಿಲ್ಲಿಸಿದೆ ಎಂದು ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಬುಧವಾರ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಹರಿಯಾಣ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಮಡಿಕೇರಿ ನಗರಕ್ಕೆ ದಿನ ಬಿಟ್ಟು ದಿನ ಕುಡಿಯುವ ನೀರು ಪೂರೈಕೆ
ಮಡಿಕೇರಿ ಜಿಲ್ಲೆಯು ಕಠಿಣ ಬೇಸಿಗೆ ಎದುರಿಸುತ್ತಿದ್ದು, ಮನೆಗಳಿಗೆ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ.

ಜಲಕ್ಷಾಮ: ಬೆಂಗಳೂರು ತೊರೆಯುತ್ತಿರುವ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಳ!
ದಿನ ಕಳೆಯುತ್ತಿದ್ದಂತೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದ್ದು, ಇದರ ಪರಿಣಾಮ ವಲಸೆ ಕಾರ್ಮಿಕರು ನಗರ ತೊರೆಯುತ್ತಿದ್ದಾರೆಂದು ತಿಳಿದುಬಂದಿದೆ.

ದಂಡದ ಎಚ್ಚರಿಕೆ ನೀಡಿದ BWSSB: ಏರೇಟರ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ
ನೀರಿನ ದುಂದು ವೆಚ್ಚ ತಗ್ಗಿಸಲು ಬೆಂಗಳೂರು ಜಲ ಮಂಡಳಿಯು ನಲ್ಲಿಗಳಿಗೆ ಕಡ್ಡಾಯಗೊಳಿಸಿರುವ ಏರೇಟರ್ ಅಳವಡಿಕೆಯ ಗಡುವಿನ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿದೆ.

ಮಹದೇವಪುರ ವಲಯದಲ್ಲಿ ನೀರಿನ ಕೊರತೆ ನೀಗಿಸಲು ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಮಹದೇವಪುರ ವಲಯದ 42 ಗ್ರಾಮಗಳಿಗೆ ನೀರಿನ ಕೊರತೆ ನೀಗಿಸಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು: ಅಂತರ್ಜಲ ವೃದ್ಧಿಗೆ ಸಮುದಾಯ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಕೆಗೆ ಜಲಮಂಡಳಿ ಚಿಂತನೆ!
ನಗರದಲ್ಲಿ ಅಂತರ್ಜಲ ವೃದ್ಧಿಗೆ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ಜಲ ಮಂಡಳಿಯಿಂದ ಸಮುದಾಯ ಮಳೆ ನೀರು ಕೊಯ್ಲು (community rainwater harvesting project) ಪ್ರಾರಂಭಿಸಲು ಚಿಂತನೆ ನಡೆಸಿದೆ.

