water

ಬೆಂಗಳೂರು: ಕಲುಷಿತ ನೀರು ಕುಡಿದು ಮಕ್ಕಳು ಸೇರಿ 120 ಮಂದಿ ಅಸ್ವಸ್ಥ!
ಕಲುಷಿತ ನೀರು ಕುಡಿದು 98 ಮಕ್ಕಳು ಮತ್ತು ಹಿರಿಯ ನಾಗರೀಕರು ಸೇರಿದಂತೆ 120ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಇಲೆಕ್ಟ್ರಾನಿಕ್ಸ್ ಸಿಟಿಯ ಹೊಸ ರಸ್ತೆಯಲ್ಲಿರುವ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್‌ನಲ್ಲಿ ಜೂನ್ 5 ರಂದು ನಡೆದಿದೆ.

ಲಿಂಗನಮಕ್ಕಿ ಜಲಾಶಯದಲ್ಲಿ ತಳ ಸೇರುತ್ತಿರುವ ನೀರು: 20 ದಿನಗಳ ಕಾಲ ಮಾತ್ರ ವಿದ್ಯುತ್ ಉತ್ಪಾದನೆ ಸಾಧ್ಯ!
ಲಿಂಗನಮಕ್ಕಿ ಜಲಾಶಯದಲ್ಲಿನ ನೀರು ತಳ ಸೇರುತ್ತಿದ್ದು, ಪ್ರಸ್ತುತ ಲಭ್ಯವಿರುವ ನೀರಿನಿಂದ ಕೇವಲ 20 ದಿನಗಳ ಕಾಲ ಮಾತ್ರ ವಿದ್ಯುತ್ ಉತ್ಪಾದಿಸಬಹುದು ಎಂದು ಹೇಳಲಾಗುತ್ತಿದೆ.

ನಗರದಲ್ಲಿ ಶೀಘ್ರದಲ್ಲೇ ನೀರಿನ ದರ ಏರಿಕೆ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರು ಬಳಕೆ ಶುಲ್ಕ ಏರಿಕೆಯಾಗುವ ಎಲ್ಲಾ ಬೆಳವಣಿಗೆಗಳು ಕಂಡು ಬರುತ್ತಿವೆ.

ರಾಯಚೂರು: ಕೆರೆಯಲ್ಲಿ ಮುಳುಗಿ ಇಬ್ಬರ ಸಾವು
ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಆತನ ಸಹೋದರನ ಮಗ ಮೃತ ಪಟ್ಟಿದ್ದಾರೆ.

ಚಿಕ್ಕಮಗಳೂರು: ನೀರಿನಲ್ಲಿ ಆಟ ಆಡುವಾಗ ಕಾಲುವೆಗೆ ಬಿದ್ದು ಮೂವರ ಸಾವು
: ಕಾಲುವೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ನೀರಿನಲ್ಲಿ ಆಟ ಆಡುವಾಗ ಆಯಾ ತಪ್ಪಿ ಈ ಘಟನೆ ಸಂಭವಿಸಿದೆ.

ನನ್ನ ಮನವಿ ಮೇರೆಗೆ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಹರಿಸುತ್ತಿದೆ: ಶಾಸಕ ಶ್ರೀಮಂತ ಪಾಟೀಲ್
ಮಹಾರಾಷ್ಟ್ರವು ಕರ್ನಾಟಕದ ಕೃಷ್ಣಾ ನದಿಗೆ 3 ಟಿಎಂಸಿ ನೀರು ಬಿಡುತ್ತಿರುವುದಕ್ಕೆ ಅವರ ನನ್ನ ಪ್ರಯತ್ನವೇ ಕಾರಣ ಎಂದು ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ.

ಬೆಳೆಗಳಿಗೆ ನೀರುಣಿಸಲು ತಾನೇ ಹೊಂಡ ತೋಡಿದ ಜಾರ್ಖಂಡ್ ರೈತ, 40 ವರ್ಷಗಳ ಪರಿಶ್ರಮಕ್ಕೆ ತಕ್ಕ ಫಲ!
ತಮ್ಮ ಹೊಲದಲ್ಲಿನ ಬೆಳೆಗೆ ನೀರಿನ ಅಭಾವ ಉಂಟಾದಾಗ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕುಮಿರ್ತಾ ಗ್ರಾಮದ ಚುಂಬ್ರು ತಮ್ಸೋಯ್ ಎಂಬ ರೈತ 100 ಅಡಿ ಅಗಲದ ಹೊಂಡವನ್ನು ತಾವೇ ತೋಡಿದ್ದಾರೆ. ಅವರ ಕನಸು ನನಸಾಗಲು 40 ವರ್ಷಗಳು ಬೇಕಾಯಿತಾದರೂ, ಕೊನೆಗೂ ರೈತನ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ.

ವಿಧಾನಸಭೆ ಚುನಾವಣೆ: ಮನೆ ಬಾಗಿಲಿಗೆ ನೀರು ಕೊಡುವ ಮೂಲಕ ಮತದಾರರ ಓಲೈಕೆಗೆ ಯತ್ನ
ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯುಎಸ್‌ಎಸ್‌ಬಿ)ಗೆ ವಿವಿಧ ಹಂತದ ರಾಜಕಾರಣಿಗಳಿಂದ ವಿವಿಧ ಪ್ರದೇಶಗಳಿಗೆ ಹೆಚ್ಚಿನ ನೀರು ಪೂರೈಸಬೇಕು ಎಂಬ...

ಸಮೃದ್ಧ ಮಳೆಗೆ ರಾಜ್ಯದಲ್ಲಿ ಅಂತರ್ಜಲ ಮಟ್ಟ ವೃದ್ಧಿ: ಈ ವರ್ಷ ನೀರಿನ ಕೊರತೆ ಇರುವುದಿಲ್ಲ!
ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಆದರೂ ಅಂತರ್ಜಲ ಮಟ್ಟವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

