water

ತಿಪ್ಪಗೊಂಡನಹಳ್ಳಿ ಜಲಾಶಯದ ನೀರನ್ನು ಕೈಗಾರಿಕೆ ಬಳಕೆಗೆ ನೀಡಿ: ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ
ಬೆಂಗಳೂರಿನ ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕಟ್ಟಡ ನಿರ್ಮಾಣಕ್ಕೆ ಮಾರಾಟ ಮಾಡುವ ಪರಿಸರ ಇಲಾಖೆಯ ಪ್ರಸ್ತಾವನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ ತರುವಾಯ ನೀತಿ ರೂಪಿಸಲಾಗುತ್ತಿದೆ.

ಅಗತ್ಯಕ್ಕನುಗುಣವಾಗಿ ಯೋಜನೆ ರೂಪಿಸಿ ಕಾಲುವೆಗಳಿಗೆ ನೀರು ಹರಿಸಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಪ್ರತಿವರ್ಷದಂತೆ ರೇಣುಕಾ ಯಲ್ಲಮ್ಮದೇವಿಗೆ ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಇಂದು ಕಾಲುವೆಗಳಿಗೆ 200 ಕ್ಯೂಸೆಕ್ ನೀರು ಬಿಡುತ್ತೇವೆ. ಮುಂದಿನ ಊರುಗಳು ಮತ್ತು ಜಮೀನುಗಳಿಗೆ ನೀರು ನುಗ್ಗದಂತೆ ನೋಡಿಕೊಂಡು ನಾಳೆಯಿಂದ 8-10 ಸಾವಿರ ಕ್ಯೂಸೆಕ್ ನೀರು ಬಿಡಲಾಗುವುದು.

ಉತ್ತಮ ಮುಂಗಾರು ಮಳೆ: ಬೆಂಗಳೂರಿಗೆ ತಿಪ್ಪಗೊಂಡನಹಳ್ಳಿ ಜಲಾಶಯದಿಂದ ನೀರು ಪೂರೈಕೆ
ಬೆಂಗಳೂರು ಬೆಳೆದಂತೆ ಮತ್ತು ನೀರಿನ ಬೇಡಿಕೆ ಹೆಚ್ಚಿರುವುದರಿಂದ, ಈ ನೀರು ಮತ್ತು ಕಾವೇರಿ 5 ನೇ ಹಂತದಿಂದ 775 ಎಂಎಲ್‌ಡಿ ಪೂರೈಕೆಯು ಪ್ರಸ್ತುತ ಪೂರೈಕೆಗೆ ಪೂರಕವಾಗಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳು ಹೇಳಿದರು.

ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಬಿಡಿ: ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ
ಕೊಯ್ನಾ ನದಿಯು ಕೃಷ್ಣಾ ನದಿಯ ಅತಿದೊಡ್ಡ ಉಪನದಿಯಾಗಿದೆ, ಇದು ದಕ್ಷಿಣಕ್ಕೆ ಹರಿಯುತ್ತದೆ ಮತ್ತು ಸಾಂಗ್ಲಿ ನಗರ ಮತ್ತು ಕೊಲ್ಹಾಪುರ ಜಿಲ್ಲೆಯನ್ನು ದಾಟಿ ಕರ್ನಾಟಕವನ್ನು ಪ್ರವೇಶಿಸುತ್ತದೆ.

ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ; ನಿಷ್ಕ್ರಿಯ ಸಚಿವರ ಬದಲಾವಣೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್
ನಿಗಮ-ಮಂಡಳಿಗಳಲ್ಲಿ ಯಾರು ಕಾರ್ಯೋನ್ಮುಖರಾಗಿಲ್ಲ ಅಂತಹವರನ್ನು ಖಂಡಿತವಾಗಿ ಬದಲಾಯಿಸಲಾಗುವುದು. ಇತ್ತೀಚೆಗೆ ನಡೆದ ಸಿಎಲ್ ಪಿ ಸಭೆಯಲ್ಲೂ ನಾನು ಈ ವಿಚಾರ ಹೇಳಿದ್ದೇನೆ.

ಮುಂಗಾರು ಕೃಷಿಗೆ KRS ನೀರು: ಸಚಿವ ಎನ್.ಚಲುವರಾಯಸ್ವಾಮಿ
ಕೆಆರ್'ಎಸ್ ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 36 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟ 111 ಅಡಿ ತಲುಪಿದೆ. ಸದ್ಯಕ್ಕೆ 115 ಅಡಿಯವರೆಗೆ ಜಲಾಶಯದ ನೀರಿನ ಮಟ್ಟ ತಲುಪುವ ನಿರೀಕ್ಷೆ ಇದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ: KRS ಜಲಾಶಯ ಇಂದಿನ ನೀರಿನಮಟ್ಟ 110 ಅಡಿ
ಕಳೆದ ನಾಲ್ಕು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾದ ಪರಿಣಾಮ ಕೆಆರ್‌ಎಸ್ ಜಲಾಶಯದ ಒಳಹರಿವು ನಿರಂತರವಾಗಿ ಹೆಚ್ಚಾಗಿದೆ.

ಸದ್ಯಕ್ಕೆ ಕೃಷಿಗೆ ನೀರು ಬಿಡಲ್ಲ: ರೈತರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ...!
ಕೃಷಿ ಸಚಿವ ಚಲುವರಾಯಸ್ವಾಮಿಯವರು ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯೊಂದಿಗೆ ಶನಿವಾರ ಸಭೆ ನಡೆಸಿದರು.

ಆಸ್ಪತ್ರೆಗಳಿಗೆ ನೀರು ಪೂರೈಕೆ ಮಾಡಲು ಯೋಗ್ಯತೆ ಇಲ್ಲದಷ್ಟು ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ: ಆರ್. ಅಶೋಕ್
ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಜೀವ ಉಳಿಸುವ ಕಾರಣಕ್ಕಾಗಿ ಕೈಗೊಳ್ಳುವ ಶಸ್ತ್ರಚಿಕಿತ್ಸೆಗೂ ನೀರು ಪೂರೈಸಲು ರಾಜ್ಯ ಸರಕಾರಕ್ಕೆ ಯೋಗ್ಯತೆ ಇಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ

