ದೇಶದೆಹಲಿ: ಸಿಂಗು ಗಡಿಯಲ್ಲಿ ಹೆಚ್ಚಿನ ಜಲ ನಿರೋಧಕ ಟೆಂಟ್ ವ್ಯವಸ್ಥೆ ಮಾಡಿಕೊಳ್ಳುತ್ತಿರುವ ರೈತರು!
ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 23ಕ್ಕೆ ದಿನಕ್ಕೆ ಕಾಲಿಟ್ಟಿದ್ದು, ಸಿಂಗು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಶೀತ ವಾತಾವರಣ ಪರಿಸ್ಥಿತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಜಲ ನಿರೋಧಕ ಟೆಂಟ್ ಗಳ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.