ರಾಜ್ಯಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ: ಸಿಎಂ ಬೊಮ್ಮಾಯಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಮ್ಮ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ನಮ್ಮಲ್ಲಿ ಚೈತನ್ಯ ಮತ್ತು ದಕ್ಷತೆಯಿಂದ ಕೆಲಸ ಮಾಡುವ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.