ದೇಶತಮಿಳು ನಾಡಿನ ಕೂನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ: ಇಂದು ಸಂಸತ್ತಿನಲ್ಲಿ ರಕ್ಷಣಾ ಸಚಿವರು ಹೇಳಿಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಇಂದು ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ರಾಜ್ಯಸಭೆಯಲ್ಲಿ ಮತ್ತು ಮಧ್ಯಾಹ್ನ 12.15ಕ್ಕೆ ಲೋಕಸಭೆಯಲ್ಲಿ ರಕ್ಷಣಾ ಸಚಿವರು ಅಧಿಕೃತ ಹೇಳಿಕೆ ನೀಡಲಿದ್ದಾರೆ.