WFI Chief

WFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ಬಜರಂಗ್ ಪುನಿಯಾ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ...

ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯ ಸಮನ್ಸ್
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದ್ದು, ಅವರ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ.

ರಸ್ತೆ ಮೇಲಲ್ಲ, ನ್ಯಾಯಾಲಯದಲ್ಲಿ ಹೋರಾಟ ಮುಂದುವರೆಯಲಿದೆ: ಕುಸ್ತಿಪಟುಗಳ ಎಚ್ಚರಿಕೆ
ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲ: ಸಾಕ್ಷಿ ಮಲಿಕ್
ನಮ್ಮ ಪ್ರತಿಭಟನೆ ರಾಜಕೀಯ ಪ್ರೇರಿತವಲ್ಲ ಎಂದಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು, ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲ ಎಂದು ಶನಿವಾರ ಹೇಳಿದ್ದಾರೆ.

ಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ, ಆರೋಪ ಪಟ್ಟಿ ದಾಖಲು
ಲೈಂಗಿಕ ಕಿರುಕುಳ ಅಪರಾಧಗಳಿಗಾಗಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

'WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲು'; ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್!
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಇದೀಗ ಯೂಟರ್ನ್ ಹೊಡೆದಿದ್ದು, WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಿಂದ ಹಿಂದೆ ಸರಿದಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆ
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿದ 17 ವರ್ಷದ ಕುಸ್ತಿಪಟುವಿನ ತಂದೆ ಭಾನುವಾರ ತಡರಾತ್ರಿ ತಾನು ಆರೋಪದಿಂದ ಹಿಂದೆ ಸರಿದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಡಬ್ಲ್ಯೂಎಫ್ ಐ ಮುಖ್ಯಸ್ಥನ ಬಂಧನಕ್ಕೆ ಜೂನ್ 9 ರವರೆಗೂ ಗಡುವು, ತಪ್ಪಿದರೆ ಆಂದೋಲನ ಆರಂಭ: ರೈತ ನಾಯಕ ಟಿಕಾಯತ್
ದೇಶದ ಅತ್ಯುನ್ನತ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಡಬ್ಲ್ಯೂಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9ರೊಳಗೆ ಬಂಧಿಸಬೇಕು, ತಪ್ಪಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧದ ಸಾಕ್ಷ್ಯ ಕೊರತೆ ಕುರಿತ ವರದಿ ತಪ್ಪು: ದೆಹಲಿ ಪೊಲೀಸ್
ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ಅಲ್ಲಗಳೆದಿದ್ದು, ಈ ವರದಿಗಳು ತಪ್ಪು ಎಂದು ಹೇಳಿದ್ದಾರೆ.

