ದೇಶ'WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲು'; ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್!
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಇದೀಗ ಯೂಟರ್ನ್ ಹೊಡೆದಿದ್ದು, WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.