Winter Session

ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಕಲಾಪ ರಚನಾತ್ಮಕವಾಗಿ ಫಲಪ್ರದವಾಗಿ ಸಾಗಲು ವಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ
ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಸೋಮವಾರ ನವೆಂಬರ್ 29ರಂದು ಆರಂಭವಾಗುತ್ತಿದೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಸಂಸತ್ತಿನ ಚಳಿಗಾಲ ಅಧಿವೇಶನ ಇಂದು ಆರಂಭ: ಸರ್ಕಾರದ ಆದ್ಯತೆಗಳೇನು, ಪ್ರತಿಪಕ್ಷಗಳು ಬಯಸುತ್ತಿರುವುದೇನು?
ಸಂಸತ್ತಿನ ಚಳಿಗಾಲ ಅಧಿವೇಶನ ಸೋಮವಾರ(ನ.29)ಆರಂಭವಾಗುತ್ತಿದೆ. ಅದಕ್ಕೂ ಮುನ್ನ ಲೋಕಸಭೆಯ ವ್ಯವಹಾರ ಸಲಹಾ ಸಮಿತಿ(Business Advisory Committee (BAC)ಯ ಸಭೆ ಇಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಸರ್ವಪಕ್ಷ ಸಭೆಯಲ್ಲಿ 31 ಪಕ್ಷಗಳ ಮುಖಂಡರು ಭಾಗಿ, ಅಡಚಣೆಯಿಲ್ಲದೆ ಚರ್ಚೆಗೆ ಸರ್ಕಾರ ಸಿದ್ಧ- ಪ್ರಹ್ಲಾದ ಜೋಶಿ
ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ.

ನಾಳೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಸದಸ್ಯರ ಸಭೆ ಕರೆದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ
ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.

ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನವೇ ಮಂಡಿಸಲಾಗುವುದು: ಕೇಂದ್ರ ಕೃಷಿ ಸಚಿವ
ಕಳೆದ ವರ್ಷ ಕೇಂದ್ರ ಸರ್ಕಾರ ತಂದಿದ್ದ ಮೂರು ತಿದ್ದುಪಡಿ ಕೃಷಿ ಕಾನೂನುಗಳನ್ನು ಹಿಂಪಡೆಯಲು ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನದ ಕಲಾಪದಲ್ಲಿಯೇ ಮಂಡಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಹೇಳಿದ್ದಾರೆ.

ಸಂಸತ್ ಅಧಿವೇಶನಕ್ಕೆ ರಣತಂತ್ರ; ನವೆಂಬರ್ 25 ರಂದು ಕಾಂಗ್ರೆಸ್ ಸಂಸದೀಯ ಸಭೆ
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ಸೋಮವಾರದಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನವೆಂಬರ್ 25ರಂದು ಸಂಸದೀಯ ಸಭೆ ಸೇರಲು ನಿರ್ಧರಿಸಿದೆ.

ಡಿಸೆಂಬರ್ 13 ರಿಂದ ಬೆಳಗಾವಿ ಅಧಿವೇಶನ: ರಾಜ್ಯಪಾಲರ ಅಧಿಸೂಚನೆ
ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 13ರಿಂದ 24 ರ ವರೆಗೆ ನಡೆಯಲಿದೆ. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ.

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಿ; ಹೊರಟ್ಟಿ ಪತ್ರ
ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ.

ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ- ಮುಖ್ಯಮಂತ್ರಿ ಬೊಮ್ಮಾಯಿ
ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

