Winter Session

ಸಂಸತ್ ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ: ಪ್ರಧಾನಿ ಮೋದಿ
ಸಂಸತ್ತು ಚಳಿಗಾಲ ಅಧಿವೇಶನದಲ್ಲಿ ಪ್ರತೀ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಇಂದಿನಿಂದ ಲೋಕಸಭೆ ಚಳಿಗಾಲ ಅಧಿವೇಶನ ಆರಂಭ: ಕೇಂದ್ರ ಸರ್ಕಾರದ ವಿರುದ್ಧ ದಾಳಿಗೆ ಪ್ರತಿಪಕ್ಷಗಳು ಸಜ್ಜು
ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಡಿಸೆಂಬರ್ 13ರವರೆಗೂ ನಡೆಯಲಿರುವ ಈ ಅಧಿವೇಶನದಲ್ಲಿ ಆರ್ಥಿಕ ಹಿಂಜರಿತ, ನಿರುದ್ಯೋಗ, ಬೆಲೆ ಏರಿಕೆ, ಕಾಶ್ಮೀರದಲ್ಲಿನ ಪರಿಸ್ಥಿತಿ, ಕಾಶ್ಮೀರದ ಸಂಸದ ಫಾರೂಖ್ ಅಬ್ದುಲ್ಲಾಗೆ ಗೃಹ ಬಂಧನ, ದೆಹಲಿ ವಾಯುಮಾಲಿನ್ಯ ಇತ್ಯಾದಿ ವಿಷಯಗಳನ್ನಿಟ್ಟುಕೊಂಡು ಕೇಂದ್ರ ಸರ್ಕಾರವನ್ನು...

ನ.18ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ ಸಾಧ್ಯತೆ: ಸರ್ಕಾರದ ಮೂಲಗಳು
ಮುಂದಿನ ತಿಂಗಳು ನವೆಂಬರ್ 18ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗಿ ಡಿಸೆಂಬರ್ ಮೂರನೇ ವಾರದವರೆಗೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆ ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ: ಸರ್ಕಾರದ ವಿರುದ್ಧ ಪತ್ರಕರ್ತರ ಪ್ರತಿಭಟನೆ
ವಿಧಾನಮಂಡಲ ಅಧಿವೇಶನ ಕಲಾಪದ ವರದಿ ಮಾಡಲು ಖಾಸಗಿ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾಗಳು, ಪತ್ರಿಕೆಗಳ ಛಾಯಾಗ್ರಾಹಕರನ್ನು ದೂರವಿಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿ, ಸ್ಪೀಕರ್ ನಡೆಯನ್ನು ತೀವ್ರವಾಗಿ ಖಂಡಿಸಿದವು.

2018ರ ಬೆಳಗಾವಿ ಅಧಿವೇಶನ: 40 ಗಂಟೆ 25 ನಿಮಿಷಕ್ಕೆ ಖರ್ಚು ಮಾಡಿದ ಹಣವೆಷ್ಟು ಗೊತ್ತೆ?
ಕಳೆದ ವರ್ಷ ಅಂದರೆ 2018 ರ ಡಿಸೆಂಬರ್ 19 ರಿಂದ 22ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗಿತ್ತು. ಒಟ್ಟು 40 ಗಂಟೆ 25 ನಿಮಿಷ ನಡೆದ ಅಧಿವೇಶನಕ್ಕೆ ಸರ್ಕಾರ ಖರ್ಚು ಮಾಡಿರುವುದು ಬರೋಬ್ಬರೀ 13.85 ಕೋಟಿ ರು ಹಣ ಎಂದು ಮಾಹಿತಿ ಹಕ್ಕು ಕಾಯಿದೆಯಿಂದ ಬಹಿರಂಗವಾಗಿದೆ.

3 ದಿನಗಳಿಗಿಂತ ಹೆಚ್ಚು ಕಾಲ ವಿಧಾನ ಮಂಡಲ ಕಲಾಪ ವಿಸ್ತರಣೆ ಇಲ್ಲ: ಎನ್. ರವಿ ಕುಮಾರ್
ಪ್ರತಿಪಕ್ಷಗಳವರು ಎಷ್ಟೇ ಒತ್ತಾಯ ಮಾಡಿದರೂ ಸಹ ಮೂರು ದಿನಗಳಿಗಿಂತ ಹೆಚ್ಚು ಕಾಲ ವಿಧಾನ ಮಂಡಲದ ಕಲಾಪಗಳನ್ನು ವಿಸ್ತರಣೆ ಮಾಡುವುದಿಲ್ಲ ಎಂದು ವಿಧಾನಪರಿಷತ್ತು ಸದಸ್ಯ ರವಿ ಕುಮಾರ್ ತಿಳಿಸಿದರು.

ವಿಧಾನಸಭೆ ಅಧಿವೇಶನ: ವಿಪಕ್ಷಗಳ ದಾಳಿ ಎದುರಿಸಲು ಬಿಜೆಪಿ ಸಿದ್ಧ
ವಿಧಾನಸಭೆ ಚಳಿಗಾಲ ಅಧಿವೇಶನ ಗುರುವಾರದಿಂದ ಆರಂಭವಾಗಲಿದ್ದು, ಪ್ರವಾಹ ಪರಿಹಾರ ಕಾರ್ಯಗಳ ಕುರಿತಂತೆ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರ ರೂಪಿಸಿದ್ದು...

ಉಪಚುನಾವಣೆ ಹಿನ್ನೆಲೆ : ಚಳಿಗಾಲದ ಅಧಿವೇಶನ 3 ದಿನಕ್ಕೆ ಸೀಮಿತಗೊಳಿಸಲು ಸಂಪುಟ ತೀರ್ಮಾನ
ಉಪಚುನಾವಣೆ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನವನ್ನು ಅಕ್ಟೋಬರ್ 10-12ರ ವರೆಗೆ ಮೂರು ದಿನಗಳಿಗೆ ಮೊಟಕುಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ.

ಚಳಿಗಾಲ ಅಧಿವೇಶನ ಕುರಿತು ಕಾಂಗ್ರೆಸ್ ಟೀಕೆಗೆ ಯಾವುದೇ ಅರ್ಥವಿಲ್ಲ: ಸಚಿವ ಮಾಧುಸ್ವಾಮಿ
ಜನರ ಆಕ್ರೋಶ ಎದುರಿಸಬೇಕಾಗುತ್ತದೆ ಎಂಬ ಭಯದಿಂದ ಬೆಳಗಾವಿ ಬದಲು ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂಬ ಕಾಂಗ್ರೆಸ್ ಟೀಕೆ ವಿರುದ್ಧ ಕಾನೂನು ಸಚಿವ ಮಾಧುಸ್ವಾಮಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

