Winter Session

ಸಮುದಾಯಕ್ಕೆ 2ಎ ಮೀಸಲಾತಿ; ಡಿಸೆಂಬರ್ 10 ರಂದು ಸುವರ್ಣಸೌಧದ ಹೊರಗೆ ಪ್ರತಿಭಟನೆ- ಬಸವಜಯ ಮೃತ್ಯುಂಜಯ ಸ್ವಾಮೀಜಿ
ಸುವರ್ಣಸೌಧದ ಎದುರು ಲಕ್ಷಾಂತರ ಪಂಚಮಸಾಲಿಗಳು ಅನೇಕ ವಕೀಲರ ನೇತೃತ್ವದಲ್ಲಿ ಜಮಾಯಿಸಿ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ.

ಸಂಸತ್ ಚಳಿಗಾಲ ಅಧಿವೇಶನ: ವಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ನವೆಂಬರ್ 27ಕ್ಕೆ ಮುಂದೂಡಿಕೆ
ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಸೂಚನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ, ವಸತಿ, ಸಾರಿಗೆ, ಆಹಾರ ಮತ್ತು ಇತರ ಸೌಲಭ್ಯಗಳಲ್ಲಿ ಯಾವುದೇ ಅನಾನುಕೂಲಗಳಾದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ- ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ
ಕಾಂಗ್ರೆಸ್ ಎಂದಿಗೂ ಜನರ ಸಮಸ್ಯೆಗಳ ಮಾತನಾಡುವುದು ಕಡಿಮೆ. ಜನರಿಂದ ತಿರಸ್ಕೃತಗೊಂಡಿರುವ ಕೆಲವರು ಬೆರಳೆಣಿಕೆಯಷ್ಟು ಜನರಿಂದ ಗೂಂಡಾಗಿರಿ ಮಾಡುವ ಮೂಲಕ ಸಂಸತ್ತನ್ನು ನಿಯಂತ್ರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ.

ಡಿಸೆಂಬರ್ 9 ರಿಂದ ಚಳಿಗಾಲ ಅಧಿವೇಶನ: ಜಿಲ್ಲಾಧಿಕಾರಿಯಿಂದ ಪೂರ್ವಸಿದ್ಧತಾ ಸಭೆ
ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದೆ. ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ನವೆಂಬರ್ 25ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ: 15 ಮಸೂದೆ ಮಂಡನೆಗೆ ಸರ್ಕಾರ ಸಿದ್ಧತೆ
ಮಾನ್ಸೂನ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ ನಂತರ ಜಂಟಿ ಸಂಸತ್ತಿನ ಸಮಿತಿಗೆ (JPC) ಕಳುಹಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ಸಿಎಂ ಸಿದ್ದರಾಮಯ್ಯಗೆ ಇದು ಕೊನೆ ಅಧಿವೇಶನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ, ಹಟಮಾರಿ. ಮುಖ್ಯಮಂತ್ರಿ ಸ್ಥಾನದ ಕೊನೆಯ ದಿನಗಳನ್ನು ಅವರು ಎಣಿಸುತ್ತಿದ್ದಾರೆ. ಇದೀಗ ಆ ಸ್ಥಾನವನ್ನು ಕಾಂಗ್ರೆಸ್ ಹರಾಜಿಗೆ ಇಟ್ಟಿದೆ. ಸಿದ್ದರಾಮಯ್ಯ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನ: ಸಮಿತಿ ರಚನೆ
ಮುಂಬರುವ ಅಧಿವೇಶನದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಲವಾರು ವಿವಾದಾತ್ಮಕ ವಿಷಯಗಳನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುವ ನಿರೀಕ್ಷೆಯಿದೆ, ಸರ್ಕಾರದ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಮೀಸಲಾದ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ ಎಂಬ ಆರೋಪವಿದೆ.

ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲ ಅಧಿವೇಶನ
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

