Winter Session

ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜನೆ: ಅನುಮತಿ ನಿರಾಕರಣೆ ಹಿನ್ನೆಲೆ ಎಂಇಎಸ್ ಪ್ರತಿಭಟನೆ
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ತಡೆಯೊಡ್ಡುವ ಉದ್ದೇಶದಿಂದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಂದ ಗದ್ದಲ, ಮಧ್ಯಾಹ್ನ 12 ಗಂಟೆಯವರೆಗೂ ಲೋಕಸಭೆ ಮುಂದೂಡಿಕೆ
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ಉಚ್ಚಾಟನೆ ಕುರಿತು ನೈತಿಕ ಸಮಿತಿ ಶಿಫಾರಸ್ಸು ವಿಷಯ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯನ್ನು ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಯಿತು.

ಮೂರನೇ ಬಾರಿಗೆ ಮೋದಿ ಸರ್ಕಾರ: ಸಂಸತ್ತಿನಲ್ಲಿ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದರು- ವಿಡಿಯೋ
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಗೆದ್ದು ಬೀಗುತ್ತಿರುವ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

ಸದನಕ್ಕೆ ಬೇಗ ಬರುವ ಶಾಸಕರಿಗೆ ವಿಶೇಷ ಟೀ ಕಪ್ ಉಡುಗೊರೆ, ತಡವಾಗಿ ಬಂದವರಿಗೂ ಪ್ರಶಸ್ತಿ: ಯುಟಿ ಖಾದರ್
ವಿಧಾನಸಭಾ ಕಲಾಪದಲ್ಲಿ ಭಾಗವಹಿಸಲು ಶಾಸಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಹೊಸ ಕ್ರಮವೊಂದನ್ನು ಘೋಷಿಸಿದ್ದಾರೆ. ಈ ಮೂಲಕ ಸದನಕ್ಕೆ ಬೇಗ ಬರುವ ಶಾಸಕರಿಗೆ ಇನ್ಮುಂದೆ ವಿಶೇಷ ಉಡುಗೊರೆ ಸಿಗಲಿದೆ.

ಡಿಸೆಂಬರ್ 4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಇಂದು ಸರ್ವಪಕ್ಷ ಸಭೆ
ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.

ಕಮಿಷನ್ ಹಣದ ವ್ಯವಹಾರಕ್ಕೆ ಸಾಕ್ಷಿ ಕೊಡಲು ಆಗುತ್ತಾ? ಬಿಜೆಪಿ ವಿರುದ್ಧದ 40 ಪರ್ಸೆಂಟ್ ಆರೋಪಕ್ಕೆ ದಾಖಲೆ ನೀಡಿದ್ದರಾ?
ಬರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ತರಾಟೆಗೆ ತೆಗೆದುಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನ ಬಿರುಸಿನ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ.

ಬೆಳಗಾವಿ ವಿಧಾನಮಂಡಲ ಅಧಿವೇಶನ: ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ; ಬಿಜೆಪಿ ಆಗ್ರಹ
ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷ ಬಿಜೆಪಿ ಸೋಮವಾರ ಹೇಳಿದೆ.

ಡಿ.5ರಿಂದ ಚಳಿಗಾಲ ಅಧಿವೇಶನ: ಬಂದೋಬಸ್ತ್‌ಗೆ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನ: ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಡಿಸೆಂಬರ್ 4 ರಂದು ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರವು ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 22ರಂದು ಮುಕ್ತಾಯಗೊಳ್ಳಲಿದೆ.

