ದೇಶಪ್ರಜಾಪ್ರಭುತ್ವ ಉಳಿಸಬೇಕಾಗಿದೆ: ಸಿಎಎ ವಿರುದ್ಧ 11 ರಾಜ್ಯಗಳ ಸಿಎಂಗಳಿಗೆ ಪಿಣರಾಯಿ ವಿಜಯನ್ ಪತ್ರ
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಬೆನ್ನಲ್ಲೇ ಸಿಎಎ ವಿರೋಧಿಸಿ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಜಾತ್ಯತೀತತೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದಾರೆ.