ಹಿರಿಯ ಯಕ್ಷಗಾನ ಕಲಾವಿದ ತೋನ್ಸೆ ಜಯಂತ್ ಕುಮಾರ್ ಸೋಮವಾರ ಮುಂಜಾನೆ ಉಡುಪಿಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.