Yakshagana

ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ; ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಯಕ್ಷಗಾನ ಕಲಿಸಬೇಕು- ಶೋಭಾ ಕರಂದ್ಲಾಜೆ
ಉಡುಪಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆಯೂ ನಡೆಯಿತು.

ಮಂಗಳೂರು: ರಂಗಸ್ಥಳದಲ್ಲೇ ಕುಸಿದು ಬಿದ್ದು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ನಿಧನ
ರಂಗಸ್ಥಳದಲ್ಲೇ ಹೃದಯಾಘಾತವಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದ.

ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ
ಯಕ್ಷಗಾನ ಲೋಕದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ (Kumble Sundar Rao) ಇಂದು ಬುಧವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.ಕಳೆದ ಕೆಲವು ದಿನಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನ: ಕಲೆಯ ಗತ ವೈಭವಕ್ಕೆ ಆಧುನಿಕತೆಯ ಸ್ಪರ್ಶ!
ಕನ್ನಡದ ಸೂಪರ್ ಹಿಟ್ ಚಿತ್ರ ಕಾಂತಾರ ಕರಾವಳಿ ಭಾಗದ ಸಂಸ್ಕೃತಿಯನ್ನು ದೇಶಾದ್ಯಂತ ಪರಿಚಯಿಸಿದ್ದು ಒಂದು ಕಡೆಯಾದರೆ, ಕಳೆದ ನವೆಂಬರ್ 12ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದಲ್ಲಿ ಯಕ್ಷಗಾನದ ಶುದ್ಧ, ಮೂಲ ರೂಪದ ಪ್ರದರ್ಶನ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು.

ಯಕ್ಷಗಾನ ವೇಷಭೂಷಣ ಧರಿಸಿ, ಹೆಜ್ಜೆ ಹಾಕಿದ ಸಚಿವ ಸುಧಾಕರ್
ಕರ್ನಾಟಕ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಯಕ್ಷಗಾನ ವೇಷಭೂಷಣ ಧರಿಸಿ ಪೋಸ್ ನೀಡಿದ್ದು, ಅವರ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.

ಮಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ 'ಯಕ್ಷಗಾನ' ತರಬೇತಿ ನೀಡುತ್ತಿರುವ ಸಹೋದರರು!
ಯಕ್ಷಗಾನ, ಕರಾವಳಿಯ ಪುರಾತನ ಕಲೆಯ ಪ್ರಕಾರಗಳಲ್ಲಿ ಒಂದಾಗಿದ್ದು, ವಿಶ್ವದಾದ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಮಂಗಳೂರಿನ ಸಹೋದರರಿಬ್ಬರು ತಮ್ಮದೇ ಆದ ರೀತಿಯಲ್ಲಿ ಈ ಕಲೆಯನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ.

ಉಡುಪಿ: ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಹುಲಿ ವೇಷ ಹಾಕಲಿದ್ದಾರೆ ವಿಕಲಚೇತನರು!
ಉಡುಪಿಯಲ್ಲಿ ವಿಜೃಂಭಣೆಯಿಂದ ಆಚರಿಸಲ್ಪಡುವ ಕೃಷ್ಣ ಜನ್ಮಾಷ್ಟಮಿಯು ಈ ವರ್ಷ ಆಗಸ್ಟ್ 19 ರಂದು ನಡೆಯಲಿದೆ. ಈ ವೇಳೆ ಏಳು ಮಂದಿ ವಿಕಲಚೇತನರ ತಂಡವು 'ಹುಲಿ ನೃತ್ಯ'ವನ್ನು ಪ್ರದರ್ಶಿಸುವ ಮೂಲಕ ಆಚರಣೆಗೆ ಹೆಚ್ಚಿನ ಮೆರುಗನ್ನು ನೀಡಲು ಸಿದ್ಧವಾಗಿದೆ.

ತೆಂಕುತಿಟ್ಟು ಯಕ್ಷಗಾನ ರಂಗದ 'ಗಾನಗಂಧರ್ವ' ಪದ್ಯಾಣ ಗಣಪತಿ ಭಟ್ ಇನ್ನಿಲ್ಲ
ತೆಂಕುತಿಟ್ಟು ಯಕ್ಷಗಾನರಂಗದ ಅಗ್ರಮಾನ್ಯ ಭಾಗವತರಾಗಿದ್ದ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಕೊರೋನಾದಿಂದ ಸಾವು
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ (73) ಬೆಂಗಳುರಿನಲ್ಲಿ ನಿಧನರಾದರು.

