Yathindra Siddaramaiah

ಅಗತ್ಯ ಹುದ್ದೆಗಳ ಇಂದಿನ ದರ: ಎಟಿಎಂ ಸರ್ಕಾರದಲ್ಲಿ ವರುಣಾದ ನಿರುದ್ಯೋಗಿ 'ಶ್ಯಾಡೋ ಸಿಎಂ' ಹಸ್ತಕ್ಷೇಪ!
ಒಂದೇ ಹುದ್ದೆಗೆ ಹಲವು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಶಿಫಾರಸ್ಸು ಪತ್ರ ನೀಡುವುದು, ಕಾರ್ಯವಾದ ಬಳಿಕ ವ್ಯವಹಾರ ಕುದುರದಿದ್ದಲ್ಲಿ, ಆದೇಶವನ್ನು ಹಿಂಪಡೆಯುವುದು! ಹೀಗೆ ಹಲವಾರು ಅಕ್ರಮಗಳನ್ನು ಮುಖ್ಯಮಂತ್ರಿ ಕಚೇರಿ ಮೂಲಕ ರಾಜಾರೋಷವಾಗಿ ನಡೆಸುತ್ತಾ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಸಂಪೂರ್ಣ ಬಹುಮತ ಸಿಗಲಿದೆ, ನಾವೇ ಸರ್ಕಾರ ರಚಿಸುತ್ತೇವೆ: ಯತೀಂದ್ರ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದೆ. ನಾವೇ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಗಲಾಟೆ ಆರಂಭಿಸಿದ್ದೇ ಬಿಜೆಪಿ: ಸಿದ್ದರಾಮಯ್ಯ; ಕಾರು-ಬೈಕ್ ಡಿಕ್ಕಿಯಿಂದ ಆದ ಜಗಳಕ್ಕೆ ರಾಜಕೀಯ ಬಣ್ಣ ಎಂದ ಯತೀಂದ್ರ
ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಗಲಾಟೆ ಶುರುಮಾಡಿದ್ದೇ ಬಿಜೆಪಿಯವರು, ಬಿಜೆಪಿ ಪಾಳಯದಲ್ಲಿ ನಮ್ಮ ಪರ ಯಾರೋ ಘೋಷಣೆ ಕೂಗಿದರು. ಅದಕ್ಕೆ ಬಿಜೆಪಿಯವರು ಗಲಾಟೆ ಶುರುಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ರಾಯಚೂರಿನಲ್ಲಿಂದು ಪ್ರತಿಕ್ರಿಯಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ; ಅಪ್ಪ ಮುಖ್ಯಮಂತ್ರಿಯಾದರೆ ನನಗೆ ಸಂತೋಷ: ಯತೀಂದ್ರ ಸಿದ್ದರಾಮಯ್ಯ
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ, ಕೋಲಾರ ಎರಡೂ ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧೆ: ಯತೀಂದ್ರ ಸಿದ್ದರಾಮಯ್ಯ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರ ಹಾಗೂ ವರುಣಾ ಎರಡೂ ಕ್ಷೇತ್ರದಿಂದ ಸ್ವರ್ಧಿಸಲು ನಿರ್ಧರಿಸಿದ್ದಾರೆ ಎಂದು ಅವರ ಪುತ್ರ, ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ನನ್ನಪ್ಪನಿಗೆ ವರುಣಾ ಕ್ಷೇತ್ರ ಲಕ್ಕಿ, ಅಲ್ಲಿ ಸ್ಪರ್ಧಿಸಿದ್ರೆ ಮುಖ್ಯಮಂತ್ರಿ ಆಗೋದು ಪಕ್ಕಾ: ಯತೀಂದ್ರ ಸಿದ್ದರಾಮಯ್ಯ
ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ ಅವರು, ತಮ್ಮ ವರುಣಾ ವಿಧಾನಸಭಾ ಕ್ಷೇತ್ರದಿಂದ ನನ್ನ ತಂದೆ ಸ್ಪರ್ಧಿಸಲಿ. ಅಪ್ಪ ವರುಣಾದಿಂದ ಗೆದ್ದು ಸಿಎಂ ಆದರು, ಹೀಗಾಗಿ ಅವರಿಗೆ ವರುಣಾ ಕ್ಷೇತ್ರ ಲಕ್ಕಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು: ಶಿವರಾಮ್ ಗಂಭೀರ ಆರೋಪ; ತಂದೆಗೆ ಜೀವ ಬೆದರಿಕೆ ಇದೆ ಎಂದ ಯತೀಂದ್ರ ಸಿದ್ದರಾಮಯ್ಯ
ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹತ್ಯೆಗೆ ಆರ್ ಎಸ್ಎಸ್ ಮತ್ತು ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮ್ ಅವರು ಆರೋಪ ಮಾಡಿದ್ದಾರೆ.

ಮೊದಲು ಪಕ್ಷ, ನಂತರ ಸ್ನೇಹ: ಶಿರಾ ಬಿಜೆಪಿ ಅಭ್ಯರ್ಥಿ ರಾಜೇಶ್ ಬಗ್ಗೆ ಯತೀಂದ್ರ ಹೇಳಿದ್ದೇನು?
ಶಿರಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಪರ ಮಾಜಿ ಸಿಎಂ ಪುತ್ರ ಹಾಗೂ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ಪ್ರಚಾರದಲ್ಲಿ ಪಾಲ್ಗೋಂಡಿದ್ದರು.

ಧರ್ಮದ ಹೆಸರಿನಲ್ಲಿ ಪೌರತ್ವ ಸರಿಯಲ್ಲ, ಬಿಜೆಪಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಯತೀಂದ್ರ ಸಿದ್ದರಾಮಯ್ಯ
ಧರ್ಮದ ಹೆಸರಿನಲ್ಲಿ ಪೌರತ್ವ ಕೊಡುವುದು ಸರಿಯಾದ ಕ್ರಮವಲ್ಲ, ಪೌರತ್ವ ಸಾಬೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಇತರ ಧರ್ಮಗಳ ಜನರು ಭಾರತದ ಪೌರತ್ವ ಕಳೆದುಕೊಳ್ಳುವ ಆತಂಕವಿದೆ. ಇದು ಸರಿಯಾದ ಕಾಯ್ದೆಯಲ್ಲ ಎಂದು ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

