Yatnal

ಉಪಚುನಾವಣೆಯಲ್ಲಿ ಹೀನಾಯ ಸೋಲು: ಪದಾಧಿಕಾರಿಗಳ ಬದಲಾವಣೆ, ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ BJP ಮುಂದು!
ಉಪಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕವು ರಾಜ್ಯ ಪದಾಧಿಕಾರಿಗಳ ಬದಲಾವಣೆ ಹಾಗೂ ಬಂಡಾಯ ನಾಯಕರನ್ನು ನಿಯಂತ್ರಿಸುವ ಕುರಿತು ಹೈಕಮಾಂಡ್'ಗೆ ಮನವಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಆಪರೇಷನ್ ಕಮಲ ಆರೋಪಕ್ಕೆ ಸಾಕ್ಷಿ ಕೊಡಿ: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಆಗ್ರಹ
ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ ಎನ್ನಲಾದ ಯಾವುದೇ ಆಡಿಯೋ, ವಿಡಿಯೋ ಅಥವಾ ಇತರ ಪುರಾವೆಗಳನ್ನು ಸಿಎಂ ಅಡಿಯಲ್ಲಿ ಕಾರ್ಯನಿರ್ವಹಿಸುವ ಗುಪ್ತಚರ ಇಲಾಖೆ ಬಿಡುಗಡೆ ಮಾಡಬೇಕು.

ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ: ಬಸನಗೌಡ ಪಾಟೀಲ್ ಯತ್ನಾಳ್
ವಕ್ಫ್ ಕಾಯ್ದೆ ಎಷ್ಟು ಅಪಾಯಕಾರಿ ಇದೆ ಎಂಬುದು ಈಗೀಗ ಜನರಿಗೆ ಗೊತ್ತಾಗುತ್ತಿದೆ. ಅವರು ಶೇ.30 ಜನಸಂಖ್ಯೆ. ಆದರೆ, ಈಗ ನಮ್ಮವರು ಶಾಸಕರಾಗಲು ಹರಸಾಹಸ ಪಡಬೇಕಿದೆ.

ಪ್ರತಿಭಟನೆ ಇರಲಿ, ಮೊದಲು ನಿಮ್ಮ ಮೇಲಿನ ಆರೋಪದಿಂದ ಹೊರಬನ್ನಿ: ಬಿವೈ ವಿಜಯೇಂದ್ರಗೆ ಎಂ.ಬಿ ಪಾಟೀಲ್ ತಿರುಗೇಟು
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ -19 ನಿರ್ವಹಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರು ಆರೋಪಿ ಮಾಡಿದ್ದಾರೆ.

ರಾಜ್ಯ ಘಟನಾವಳಿಗಳ ಕ್ರೋಢಿಕರಿಸಿ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿ: ರಾಜ್ಯಪಾಲರಿಗೆ ಯತ್ನಾಳ್ ಆಗ್ರಹ
ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದು, ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.

ಡಿಕೆಶಿ ಮಾನನಷ್ಟ ಮೊಕದ್ದಮೆ: ಯತ್ನಾಳ್‌ಗೆ ಭದ್ರತೆ ಒದಗಿಸುವಂತೆ ಎಸ್‌ಪಿಗೆ ಹೈಕೋರ್ಟ್ ನಿರ್ದೇಶನ
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ವಿರುದ್ಧ 204 ಕೋಟಿ ರೂಪಾಯಿ ಪರಿಹಾರ ಕೋರಿ ಹೂಡಿರುವ ಮಾನಹಾನಿ ದಾವೆಯನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ...

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಕೋಮು ದ್ವೇಷ ಪ್ರಕರಣಕ್ಕೆ ಹೈಕೋರ್ಟ್ ತಡೆ
ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

204 ರೂ. ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ: ಬೆಂಗಳೂರಿಗೆ ವರ್ಗಾವಣೆ ಕೋರಿ ಯತ್ನಾಳ್ ಮನವಿ, ಡಿಕೆಶಿಗೆ 'ಹೈ' ನೋಟಿಸ್
ತಮ್ಮ ವಿರುದ್ಧ ದಾಖಲಾಗಿರುವ ರೂ.204 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮನವಿ ಮಾಡಿಕೊಂಡಿದ್ದು, ಈ ಸಂಬಂಧ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆತ: ಎಲ್ಲಾ ಅರ್ಜಿಗಳ ಒಟ್ಟಾಗಿ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧಾರ
ಡಿ ಕೆ ಶಿವಕುಮಾರ್ ಅವರ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಕೋರಿ ಸಿಬಿಐ ವಕೀಲರು ಹಲವು ಬಾರಿ ಕೋರಿದ ಹೊರತಾಗಿಯೂ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿತು.

