ರಾಜ್ಯಅಯೋಧ್ಯೆ: ಐದು ಎಕರೆ ಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ; ಉತ್ತರಪ್ರದೇಶ ಅನುಮತಿಗಾಗಿ ರಾಜ್ಯ ಸರ್ಕಾರ ನಿರೀಕ್ಷೆ!
ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶಂಕುಸ್ಥಾಪನೆ ವಿಚಾರವಾಗಿ ರಾಜಕೀಯ ಪಕ್ಷಗಳ ನಡುವೆ ಮಾತಿನ ಸಮರ ನಡೆಯುತ್ತಿದ್ದು, ಈ ನಡುವಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಮುಂದಾಗಿರುವ ರಾಜ್ಯ ಸರ್ಕಾರ, 5 ಎಕರೆ ಭೂಮಿ ಪಡೆಯಲು ಉತ್ತರ ಪ್ರದೇಶ ಸರ್ಕಾರದ ಅನುಮತಿಗಾಗಿ ಕಾದು ಕುಳಿತಿದೆ.