Yeddyurappa

ಜೆಎನ್'ಯು ಹಿಂಸಾಚಾರ: ಶುರುವಾಯ್ತು ರಾಜಕೀಯ ಕೆಸರೆರಚಾಟ, ಮೌನ ತಾಳಿದ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ
ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಘಟನೆಯ ಬಗ್ಗೆ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟ ಆರಂಭಗೊಂಡಿದ್ದು, ಪ್ರಕರಣ ಸಂಬಂಧ ಪ್ರದಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೌನ ತಾಳಿಸಿದ್ದಾರೆ.

ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಮುಳುಗಡೆಗೊಂಡ ಜಮೀನುಗಳಿಗೆ ಸಿಗುತ್ತಾ ಪರಿಹಾರ?
ಆಲಮಟ್ಟಿ ಜಲಾಶಯದ ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಮುಳುಗಡೆ ವ್ಯಾಪ್ತಿಯ ಜಮೀನುಗಳಿಗೆ ಪ್ರತಿ ಎಕರೆ ಒಣ ಬೇಸಾಯ ಭೂಮಿಗೆ ೩೦ ಲಕ್ಷ ರೂ., ನೀರಾವರಿಗೆ ೪೦ ಲಕ್ಷ ರೂ. ಸಿಗಲಿದೆ ಎನ್ನುವ ರೈತರ ನಿರೀಕ್ಷೆಗೆ ಫಲ ಸಿಕ್ಕುವ ಕಾಲ ಸನ್ನಿಹಿತವಾಗಿದೆ.

ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ ಸ್ಥಗಿತಗೊಳಿಸಿ; ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ
ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದ ಬೇಡಿಕೆಗಳಿಗೆ ಮೋದಿ ಸ್ಪಂದಿಸಿಲ್ಲ ಎನ್ನುವುದು ಸರಿಯಲ್ಲ: ಯಡಿಯೂರಪ್ಪ ಸ್ಪಷ್ಟನೆ
ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಮಾಧ್ಯಮಗಳ ವರದಿಗಳು ಆಧಾರ ರಹಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಏಸು ವಿವಾದ ಮುಂದುವರೆಸಬೇಡಿ: ಸಚಿವರಿಗೆ ಸಿಎಂ ಯಡಿಯೂರಪ್ಪ ತಾಕೀತು
ಕನಕಪುರ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ಮಾಜಿ ಸಚಿವ ಡಿಕೆ. ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ರಾಜಕೀಯ ಟೀಕೆ ಮಾಡುವುದು ಬೇಡ ಎಂದು ಮುಖ್ಯಮಂತ್ರಿಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರಿಗೆ ಸಲಹೆ ನೀಡಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಅಮಾನವೀಯವಾಗಿ ವರ್ತಿಸುತ್ತಿದೆ: ಯಡಿಯೂರಪ್ಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಬೀರ: ಮಠದಲ್ಲೇ ಚಿಕಿತ್ಸೆ ಆರಂಭ, ಉಡುಪಿಯಲ್ಲೇ ಉಳಿದ ಸಿಎಂ
ನ್ಯೂಮೋನಿಯಾದಿಂದಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಮೆದುಳು ಕಾರ್ಯ ಕುಂಠಿತಗೊಂಡಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲೂ ಬ್ರಾಹ್ಮಣರಿಗೆ ಶೇ.10 ಮೀಸಲಾತಿ: ಬ್ರಾಹ್ಮಣ ಸಮ್ಮೇಳನದಲ್ಲಿ ಯಡಿಯೂರಪ್ಪ ಭರವಸೆ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬ್ರಾಹ್ಮಣ ಸಮಾಜಕ್ಕೆ ಕೇಂದ್ರ ಸರ್ಕಾರದ ನೀತಿಯಂತೆ ಶೇ.10 ರಷ್ಟು ಮೀಸಲಾತಿ ನೀಡಿರುವ ಉದಾಹರಣೆಗಳಿವೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಆದೇಶವನ್ನು ಪರಿಶೀಲಿಸಿ ಕರ್ನಾಟಕದಲ್ಲಿಯೂ ಜಾರಿಗೊಳಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್: ಸಿದ್ಧತೆ ಆರಂಭಿಸಿದ ಸಿಎಂ ಯಡಿಯೂರಪ್ಪ
ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆಗಳಿದ್ದು, ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ...

