Yeddyurappa

ದಯವಿಟ್ಟು ರಾಜೀನಾಮೆ ನೀಡಿ, ನಮ್ಮ ಜನರನ್ನು ಶಿಕ್ಷಿಸಬೇಡಿ: ಯಡಿಯೂರಪ್ಪಗೆ ಸಿದ್ದರಾಮಯ್ಯ
ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ, ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಹೇಳಿದ್ದಾರೆ.

ಕೇಂದ್ರದಿಂದ ನೆರೆ ಪರಿಹಾರ ಸಿಗದಿದ್ದರೂ ಮನೆಗಳ ನಿರ್ಮಾಣಕ್ಕೆ ಆದೇಶಿಸಿದ ಸಿಎಂ ಯಡಿಯೂರಪ್ಪ
ಪ್ರವಾಹದಿಂದಾಗಿ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡದಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತ್ರಸ್ತರ ಮನೆಗಳ ನಿರ್ಮಾಣಕ್ಕೆ ಗುರುವಾರ ಆದೇಶ ನೀಡಿದ್ದಾರೆ.

ಯಡಿಯೂರಪ್ಪ ಜೊತೆ ಯಾವುದೇ ಮನಸ್ತಾಪವಿಲ್ಲ, ಅನರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಕಟೀಲ್
ನನ್ನ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ರೀತಿಯ ಮನಸ್ತಾಪಗಳಿಲ್ಲ. ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿದ್ದಾರೆ.

ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಭೇಟಿಯಾದ ಕಾಂಗ್ರೆಸ್ ಮುಖಂಡರು
ನಗರಾಭಿವೃದ್ಧಿ ಕಾರ್ಯಗಳ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್ ಕ್ಷೇತ್ರಗಳಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ತಾರತಮ್ಯವನ್ನು ಬಗೆಹರಿಸಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡರು ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿದರು.

ಪ್ರವಾಹ ಪರಿಹಾರ ಕೇಳಲು ಸರ್ವಪಕ್ಷ ನಿಯೋಗ ದೆಹಲಿಗೆ: ವಿಪಕ್ಷಗಳ ವಿರುದ್ಧ ಯಡಿಯೂರಪ್ಪ ಕಿಡಿ
ಪ್ರವಾಹ ಪರಿಹಾರ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಬಳಿ ಮಾತನಾಡಲು ಧೈರ್ಯವಿಲ್ಲ ಎಂದಾದಲ್ಲಿ ಸರ್ವಪಕ್ಷಗಳ ನಿಯೋಗದೊಂದಿಗೆ ತೆರಳಿ ನಾವು ಮಾತನಾಡುತ್ತೇವೆಂದು ಹೇಳಿದ್ದ ವಿರೋಧ ಪಕ್ಷಗಳ ನಾಯಕರ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಸ್ವಪಕ್ಷದಿಂದಲೇ ಹೆಚ್ಚಿದ ಒತ್ತಡ: ಬಳ್ಳಾರಿ ವಿಭಜನೆಗೆ ಸಿಎಂ ಯಡಿಯೂರಪ್ಪ ಬ್ರೇಕ್
ಸ್ವಪಕ್ಷದಿಂದಲೇ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ತಡೆ ನೀಡಿದ್ದಾರೆ...

3-4 ದಿನಗಳಲ್ಲಿ ಕೇಂದ್ರ ಪರಿಹಾರ ಬಿಡುಗಡೆ ಮಾಡಲಿದೆ: ಸಿಎಂ ಯಡಿಯೂರಪ್ಪ
ರಾಜ್ಯಕ್ಕೆ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದೆ. ಮೂರ್ನಾಲ್ಕು ದಿನದಲ್ಲಿ ಪರಿಹಾರ ಬಿಡುಗಡೆ ಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ 2 ತಿಂಗಳುಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸಲು ಸಾಧ್ಯವಿಲ್ಲ: ಕುಮಾರಸ್ವಾಮಿ
ರಾಜ್ಯದ ಜನರನ್ನು ಲೂಟಿ ಮಾಡುವ ಸಲುವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ
ನಗರದ ಹೊರವಲಯದಲ್ಲಿನ ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜಮೀನನ್ನು ಅಕ್ರಮ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ದೂರು ದಾಖಲಾಗಿದೆ.

