Yettinahole project

1 ವಾರದೊಳಗೆ ಎತ್ತಿನಹೊಳೆ ಯೋಜನೆ ಕೆಲಸ ಪ್ರಾರಂಭಿಸಲಿದ್ದೇವೆ: DCM ಡಿ.ಕೆ ಶಿವಕುಮಾರ್
ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯ ಕೆಲಸವು ಒಂದು ವಾರದೊಳಗೆ ಪ್ರಾರಂಭವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಎತ್ತಿನಹೊಳೆ ಯೋಜನೆ: ವಿದ್ಯುತ್ ಪೂರೈಸಿದ ಸೆಸ್ಕಾಂಗೆ ಕೋಟ್ಯಂತರ ರೂ ಬಿಲ್ ಬಾಕಿ; ನೋಟಿಸ್ ಕೊಟ್ಟರೂ ಕ್ಯಾರೆ ಎನ್ನುತ್ತಿಲ್ಲ ಸರ್ಕಾರ..!
ಹಾನುಬಾಳ್ಳು, ದೊಡ್ಡನಗರ, ಕುಂಬಾರಡಿ, ಕಾಡುಗರಹಳ್ಳಿ, ಎತ್ತಿನಹೊಳೆ 1 ಮತ್ತು 2 ಕೇಂದ್ರಗಳು ಪ್ರಮುಖವಾಗಿದ್ದು, ಈ ಎಲ್ಲಾ ಘಟಕಗಳ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿದೆ. ಆದರೆ ಇವುಗಳ ವಿದ್ಯುತ್ ಬಿಲ್‌ಗಳು ಹಲವು ತಿಂಗಳುಗಳಿಂದ ಪಾವತಿಯಾಗದೇ ಬಾಕಿ ಉಳಿದಿದೆ.

ಆಮೆಗತಿಯಲ್ಲಿ ಎತ್ತಿನಹೊಳೆ ಯೋಜನೆ: ರಾಜ್ಯಸಭೆಯಲ್ಲಿ ಹೆಚ್.ಡಿ ದೇವೇಗೌಡ ಪ್ರಸ್ತಾಪ; ರಾಜ್ಯ ಸರ್ಕಾರದ ವಿರುದ್ಧ ಕಿಡಿ! Video
ಬಜೆಟ್ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಕಿಡಿಕಾರಿದರು.

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ ಶಿವಕುಮಾರ್
ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ರಾಜ್ಯಕ್ಕೆ ಹಣ್ಣು ಮತ್ತು ಹೂವುಗಳನ್ನು ಪೂರೈಸುತ್ತವೆ. ಬರಪೀಡಿತ ಜಿಲ್ಲೆಗಳ ರೈತರು 2,000 ಅಡಿಗಳಿಂದ ಎಳೆದ ಅಂತರ್ಜಲವನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದಾರೆ.

ರಾಜ್ಯಕ್ಕೆ ಕೇಂದ್ರ ಸರ್ಕಾರ ಶಾಕ್: ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ತಡೆ..!
ಯೋಜನೆಯ ಮೊದಲ ಹಂತದಲ್ಲಿ ಹಲವು ಕಾಮಗಾರಿಗಳು ಅನಧಿಕೃತವಾಗಿದೆ. ಇಂತಹ ಕಾಮಗಾರಿಗಳಿಂದ ಪರಿಸರದ ಮೇಲೆ ಭಾರಿ ಅನಾಹುತವಾಗಿದೆ ಎಂದು ಕೇಂದ್ರ ಪರಿಸರ ಇಲಾಖೆಯ ಸಲಹಾ ಸಮಿತಿ ಹೇಳಿದೆ.

2027 ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿ.ಕೆ ಶಿವಕುಮಾರ್
ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ತೆಗೆದುಕೊಂಡು ಹೋಗುವ ಕಾಮಗಾರಿಗಳು ಬಾಕಿ ಇದ್ದವು. ಇಲ್ಲಿಯೂ ಪೈಪ್ ಅಳವಡಿಕೆಗೆ ಅನುಮತಿ ನೀಡಿದ್ದೇವೆ. ನಮ್ಮ ನಾಯಕರು ಸೇರಿದಂತೆ ಸ್ಥಳೀಯ ಶಾಸಕರು ಸೇರಿ ಅಲ್ಲಿ ಪೂಜೆ ಸಲ್ಲಿಸಿ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು.

ಎತ್ತಿನಹೊಳೆ ಯೋಜನೆ: ಅರಣ್ಯ ಭೂಮಿ ಬಳಕೆಗೆ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಮನವಿ!
ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವನೆ.

2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವುದು ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್
ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವರ್ಷ ಸೆಪ್ಟೆಂಬರ್ 6ರಂದು ಚಾಲನೆ ನೀಡಿದ್ದರು.

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ
ಮೂಲಸೌಕರ್ಯ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ, ತಂತ್ರಜ್ಞಾನ ಆವಿಷ್ಕಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ರೂಪಿತವಾಗಿರುವ ಇನ್ಫ್ರಾಸ್ಟ್ರಕ್ಚರ್ ಸ್ಕಿಲ್ ಡೆವಲಪ್ಮೆಂಟ್ ಅಕಾಡಮಿ (ISDA) ಸಂಸ್ಥೆಯು ವಿಜೆಎನ್ಎಲ್ ಗೆ ಕಳೆದ ಜೂನ್ 14 ರಂದು ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿದೆ.

