ದೇಶಪಕ್ಷ ವಿರೋಧಿ ಚಟುವಟಿಕೆ: ದೆಹಲಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಶಶಿ ಯಾದವ್ ಪಕ್ಷದಿಂದ ಉಚ್ಛಾಟನೆ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ದೆಹಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿ ಯಾದವ್ ಅವರನ್ನು ಮಂಗಳವಾರ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷದ ಶಿಸ್ತಿನ ಆಧಾರದ ಮೇಲೆ ಯಾದವ್ ಅವರನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಪಕ್ಷದಿಂದ ಹೊರಹಾಕಿದ್ದಾರೆ.