Zameer ahmed khan

ಸಿದ್ದರಾಮಯ್ಯ ಅರಮನೆ ಕಟ್ಟಿಲ್ಲ, ಸಣ್ಣದೊಂದು ಮನೆ ಕಟ್ಟಿದ್ದಾರೆ; ಅವರು ವೀಕ್ ಆಗಿಲ್ಲ, ರಾಜಕೀಯದಲ್ಲಿ ಟಗರು: ಜಮೀರ್ ಅಹ್ಮದ್ ಖಾನ್
ಸಿದ್ದರಾಮಯ್ಯ ನಮ್ಮ ನಾಯಕರು. ಅವರು ವೀಕ್ ಆಗೋಕೆ ಸಾಧ್ಯವಿಲ್ಲ, ಅವರು ಎಲ್ಲ ಜಾತಿ ಮತ್ತು ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ನಿಜವಾದ ಅಹಿಂದ ನಾಯಕ. ಅವರು ವೀಕ್ ಆಗಲ್ಲ,

IMA ಹಗರಣ: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಿಬಿಐ ತನಿಖೆಗೆ ಹೂಡಿಕೆದಾರರ ಆಗ್ರಹ!
ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 50 ರ ಅಡಿಯಲ್ಲಿ, ಜಮೀರ್ ಅಹ್ಮದ್ ಖಾನ್ ಅವರಿಗೆ ಸುಮಾರು 54 ಕೋಟಿ ರೂ. ಪಾವತಿಸಲಾಗಿದೆ ಎಂದು ಮನ್ಸೂರ್ ಖಾನ್ ಹೇಳಿದ್ದಾರೆ.

'ನಾನು ಮುಸ್ಲಿಂ ಆಗಿರಬಹುದು ಅದಕ್ಕಿಂತ ಮೊದಲು ಹಿಂದೂಸ್ತಾನಿ, ನಾನು ಕನ್ನಡಿಗ; ಬಿಜೆಪಿಯವರಿಂದ ದೇಶಭಕ್ತಿ ಕಲಿಯುವ ಅಗತ್ಯವಿಲ್ಲ'
ವಿಜಯನಗರ ಜಿಲ್ಲೆಯ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದಿಂದ ವಿನಾಯ್ತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ವಿಚಾರವಾಗಿ ಮಾತನಾಡಿದ ಅವರು, ಮಂತ್ರಿ ಆದಮೇಲೆ ಧ್ವಜಾರೋಹಣ ಮಾಡುವುದು ಪ್ರತಿಯೊಬ್ಬರಿಗೂ ದೊಡ್ಡ ಸೌಭಾಗ್ಯ.

'ಸಚಿವ ಜಮೀರ್ ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕಾಂಗ್ರೆಸ್ ಸರ್ಕಾರದ ನಿಜ ಬಣ್ಣ ಮತ್ತೊಮ್ಮೆ ಬಯಲಾಗಿದೆ': ಆರ್ ಅಶೋಕ್
ಸಚಿವ ಜಮೀರ್ ಅಹ್ಮದ್ ಖಾನ್ ಮನವಿಗೆ ನೀಡಿರುವ ಕಾರಣವೇನು? ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಮುಂಬರುವ ವಿಧಾನಸಭಾ ಉಪಚುನಾವಣೆಗಳು ಹಾಗೂ ಪಕ್ಷದ ಆಂತರಿಕ ರಾಜಕೀಯ ಚಟುವಟಿಕೆಗಳ ಮೇಲೆ ಗಮನಹರಿಸಬೇಕಿರುವುದರಿಂದ ತಮ್ಮ ಬಳಿ ಸಮಯವಿಲ್ಲ ಎಂದು ಅವರು ಹೇಳಿದ್ದಾರೆ.

'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಸಿಎಂಗೆ ಜಮೀರ್ ಅಹ್ಮದ್ ಪತ್ರ
ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಜಮೀರ್ ಅವರು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಜಯನಗರದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುವ ಕರ್ತವ್ಯದಿಂದಲೂ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಜತೆ ಮುನಿಸಿಲ್ಲ; ನನಗೆ ಸಚಿವ ಸ್ಥಾನ ನೀಡದಂತೆ ಹೈಕಮಾಂಡ್‌ಗೆ ಅವರು ಹೇಳಿಲ್ಲ: ಜಮೀರ್ ಸ್ಪಷ್ಟನೆ
ಮೈಸೂರಲ್ಲಿ ಯತೀಂದ್ರ ಸಿದ್ದರಾಮಯ್ಯನವರು ಮುಸ್ಲಿಂ ಸಮಾಜದವರಿಗೆ ಕೊಡಿ ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದು ಹೇಳಿದ್ದಾರೆ ಆದ್ರೆ ಸಿದ್ದರಾಮಯ್ಯನವರು ನನಗೆ ಸಚಿವ ಸ್ಥಾನ ನೀಡಬೇಡಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಜಮೀರ್‌ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಕೇಸ್: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗ
ಲೋಕಾಯುಕ್ತದಲ್ಲಿ ಒಂದು ವರ್ಷಕ್ಕೂ ಕಡಿಮೆ ಅವಧಿ ಸೇವೆ ಸಲ್ಲಿಸಿದ್ದ ಶಿವಪ್ರಕಾಶ್ ದೇವರಾಜು ಅವರು ನಿನ್ನೆ ಬೆಳಗ್ಗೆ 10.30ಕ್ಕೆ ಕಚೇರಿಗೆ ಆಗಮಿಸಿದ ವೇಳೆ ವರ್ಗಾವಣೆ ಆದೇಶವನ್ನು ಸ್ವೀಕರಿಸಿದರು.

'ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದೇನೆ, ಸಿಗದಿದ್ದರೆ ಬೇಸರವಿಲ್ಲ': ಜಮೀರ್ ಅಹ್ಮದ್ ಖಾನ್
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಭಿಮಾನಿಗಳು ಪ್ರತಿಭಟಿಸುವುದು ಸಹಜ. ಆದರೆ, ತಾವು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ನಾನು ಎಲ್ಲೂ ಬಹಿರಂಗವಾಗಿ ಸಚಿವ ಸ್ಥಾನ ಕೊಡಿ ಎಂದು ಕೇಳಿಲ್ಲ. ಸಚಿವ ಸ್ಥಾನ ಸಿಗದಿದ್ದರೆ ಯಾವುದೇ ಬೇಸರವಿಲ್ಲ ಎಂದರು.

