Zameer ahmed khan

ವಿರೋಧದ ನಡುವೆಯೂ ಚಾಮರಾಜಪೇಟೆಯಲ್ಲಿ ಗಣೇಶ ಕೂರಿಸಿದ ಶಾಸಕ ಜಮೀರ್ ಅಹ್ಮದ್ ಖಾನ್!
ರಾಷ್ಟ್ರಮಟ್ಟದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಕೊನಗೂ ಚಾಮರಾಜಪೇಟೆಯಲ್ಲಿ ಗಣೇಶ ಮೂರ್ತಿ ಕೂರಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ: ಸಚಿವ ಆರ್ ಅಶೋಕ್; ಶಾಸಕ ಜಮೀರ್ ವಿರುದ್ಧ ಶ್ರೀರಾಮ ಸೇನೆ ದೂರು
ವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆಯೇ ಹೊರತು ಬೇರಾರಿಗೂ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಘೋಷಣೆ ಮಾಡಿದ್ದಾರೆ.

ಈದ್ಗಾ ಮೈದಾನ ವಿವಾದ: ಧಾರ್ಮಿಕ ಆಚರಣೆಗೆ ಅನುಮತಿ ನೀಡುವುದನ್ನು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ- ಜಮೀರ್ ಗೆ ಅಶೋಕ್ ತಿರುಗೇಟು
ಚಾಮರಾಜಪೇಟೆಯ ಮೈದಾನ ಕಂದಾಯ ಆಸ್ತಿಯಾಗಿದ್ದು ಇಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ವಿವಿಧ ಉತ್ಸವಗಳಿಗೆ ಅನುಮತಿ ನೀಡುವುದು, ಬಿಡುವುದು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ ಎಂದು ಸಚಿವ ಆರ್ ಅಶೋಕ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ತಿರುಗೇಟು ನೀಡಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್
ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಪಕ್ಷ ಪೂಜೆನೂ ಮಾಡ್ತಿನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಟಾಂಗ್
ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್. ಪಕ್ಷ ಪೂಜೆನೂ ಮಾಡ್ತಿನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

'ಯಾರೊಬ್ಬರ ಹೇಳಿಕೆಯಿಂದ ಕಾಂಗ್ರೆಸ್ ನಲ್ಲಿ ಸಿಎಂ ಆಗಲ್ಲ'; ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್
ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಚಾರವಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿರುವಂತೆಯೇ ವಿವಾದಕ್ಕೆ ಇತಿಶ್ರೀ ಹಾಡುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಿದೆ.

'ಮುಂದಿನ ಸಿಎಂ ಹೇಳಿಕೆ ಮೊದಲು ಕೊಟ್ಟವರೇ ಅವರು, ನಾವು ಮುಂದುವರಿಸಿಕೊಂಡು ಹೋದೆವು': ಜಮೀರ್ ಅಹ್ಮದ್ ತಿರುಗೇಟು
ಕಾಂಗ್ರೆಸ್ ನಲ್ಲಿ 'ಸಿಎಂ ಕುರ್ಚಿ ಕಾದಾಟ' ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ನಾಯಕರ ಟಾಕ್ ವಾರ್ ಜೋರಾಗಿದೆ. ಸಿದ್ದರಾಮೋತ್ಸವ ದಿನ ಹತ್ತಿರ ಬರುತ್ತಿದ್ದಂತೆ ಅದು ಜೋರಾಗಿದೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ತಿ ಮೌಲ್ಯ 87 ಕೋಟಿ ರೂ!
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಠಾತ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ, ಶಾಸಕರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ಗೆ ಎಸಿಬಿ ಶಾಕ್: ಮನೆ, ಕಚೇರಿ ಸೇರಿದಂತೆ ಹಲವೆಡೆ ಪರಿಶೀಲನೆ; ಬೆಂಬಲಿಗರ ಪ್ರತಿಭಟನೆ
ಐಎಂಎ ವಂಚನೆ ಪ್ರಕರಣ ಸಂಬಂಧ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

