ರಾಜಕೀಯಜಮೀರ್ ಅಹ್ಮದ್ ಮುಂದೊಂದು ದಿನ ರಾಜ್ಯದ ಸಿಎಂ ಆಗಬೇಕು: ವಿರಕ್ತಮಠ ಸ್ವಾಮೀಜಿ
ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಬಡಿದಾಟ ಜೋರಾಗಿರುವಾಗಲೇ ವಿರಕ್ತಮಠದ ಪಂಚಾಕ್ಷರಿ ಸ್ವಾಮಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.