ರಾಜ್ಯಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಕಾ ವೈರಸ್ ಪತ್ತೆ ಬಗ್ಗೆ ಆತಂಕಬೇಡ: ರಾಜ್ಯ ಸರ್ಕಾರದ ಮಾರ್ಗಸೂಚಿ ಬಿಡುಗಡೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೊಳ್ಳೆಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಗುರುವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಜನರು ಅನಾವಶ್ಯಕವಾಗಿ ಆತಂಕಗೊಳ್ಳದಂತೆ, ಜ್ವರದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದೆ.