ರಾಜ್ಯದಾವಣಗೆರೆ: ಕೊರೋನಾ ಜಾಗೃತಿ ಮೂಡಿಸಲು ಹೋದ ಅಂಗನವಾಡಿ ಕಾರ್ಯಕರ್ತೆ ಮೇಲೆ ಗುಂಪಿನಿಂದ ಹಲ್ಲೆ
ಮಾರಕ ಕೊರೋನಾವೈರಸ್ ಹರಡುವಿಕೆಯನ್ನು ತಡೆಗಟ್ಟಲು ಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸಿದ ಅಂಗನವಾಡಿ ಕಾರ್ಯಕರ್ತರೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಬೀದರಹಳ್ಳಿ ತಾಂಡಾದಲ್ಲಿ ನಡೆದಿದೆ.