ಅಂಗನವಾಡಿ ಸಹಾಯಕಿ

ಕನಕಪುರ: ಮಗುವಿಗೆ ಚಾಕುವಿನಿಂದ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ಅಂಗನವಾಡಿ ಸಹಾಯಕಿ ಕ್ರೌರ್ಯ
ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ದೀಕ್ಷಿತ್ ತಾಯಿ ಚೈತ್ರಬಾಯಿ ಅಂಗನವಾಡಿ ಬಳಿ ಹೋದಾಗ ಮಗು ಅಳುತ್ತಿರುವುದನ್ನು ಗಮನಿಸಿ ವಿಚಾರಿಸಿದಾಗ, ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್‌ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ.

ಪೊಲೀಸ್ ಮಾಹಿತಿದಾರರೆಂಬ ಶಂಕೆ: ಅಂಗನವಾಡಿ ಸಹಾಯಕಿಯನ್ನು ಕೊಂದ ನಕ್ಸಲೀಯರು
ಲಕ್ಷ್ಮೀ ಪದಂ (45) ಎಂಬುವರ ಮನೆಗೆ ನುಗ್ಗಿದ ಅಪರಿಚಿತ ನಕ್ಸಲೀಯರು ಮನೆಯವರ ಎದುರೇ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬಳಿಕ ಶವವನ್ನು ಮನೆಯ ಅಂಗಳದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಕೊಪ್ಪಳ: ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್ ಕಸಿದುಕೊಂಡ ಅಂಗನವಾಡಿ ಶಿಕ್ಷಕಿ ವಿಡಿಯೋ ವೈರಲ್!
ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದರು. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ.

ಅಂಗನವಾಡಿ ಮಕ್ಕಳು ಹೂ ಕಿತ್ತಿದ್ದಕ್ಕೆ ಸಹಾಯಕಿಯ ಮೂಗು ಕತ್ತರಿಸಿದ ಪಾಪಿ: ಬೆಳಗಾವಿಯಲ್ಲಿ ರಾಕ್ಷಸಿ ಕೃತ್ಯ!
ಅಂಗನವಾಡಿ ಮಕ್ಕಳು ಹೂ ಕಿತ್ತುಕೊಂಡರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬರು ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ.

