ರಾಜ್ಯಅಂತರ್ ರಾಜ್ಯ ಸಮಸ್ಯೆಗಳ ಇತ್ಯರ್ಥಕ್ಕೆ ಪಿಆರ್'ಒ ಕೆಲಸ ಮಾಡುತ್ತೇನೆ: ಲೆಹರ್ ಸಿಂಗ್
ಅಂತರರಾಜ್ಯ ನದಿ ನೀರು ಹಂಚಿಕೆ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ನೆರೆಯ ರಾಜ್ಯಗಳ ರಾಜ್ಯಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಭಾನುವಾರ ಹೇಳಿದ್ದಾರೆ.