ಅಂತಾರಾಷ್ಟ್ರೀಯ ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸ್ಮೃತಿ ಮಂಧಾನ ವಿಶಿಷ್ಟ ದಾಖಲೆ!
ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟರು ಅದರಲ್ಲೂ ಮೊದಲ ಮೂರು ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ ಈ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದರು.

ಅಂತಾರಾಷ್ಟ್ರೀಯ ಕ್ರಿಕೆಟಿಗೆ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ವಿದಾಯ!
ದಕ್ಷಿಣ ಆಫ್ರಿಕಾದ ವಿಕೆಟ್-ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಪೂರನ್ ಈ ನಿರ್ಧಾರ ಘೋಷಿಸಿದ್ದಾರೆ.

ಹಿನ್ನೋಟ 2024: ನಿವೃತ್ತಿಯಾದ ಅಂತಾರಾಷ್ಟ್ರೀಯ ಸ್ಟಾರ್ ಕ್ರಿಕೆಟಿಗರು
ಜೇಮ್ಸ್ ಆಂಡರ್ಸನ್, ಶಿಖರ್ ಧವನ್ ಮತ್ತು ಟಿಮ್ ಸೌಥಿ ಸೇರಿದಂತೆ ಅನೇಕ ಕ್ರಿಕೆಟಿಗರು ತಮ್ಮ ವೃತ್ತಿಜೀವನದ ಕಠಿಣ ನಿರ್ಧಾರದಿಂದ ಸುದ್ದಿಯಾಗಿದ್ದರು.

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ಶಿಖರ್ ಧವನ್ ನಿವೃತ್ತಿ ಘೋಷಣೆ
ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ.ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾಕಿಸ್ತಾನ ಸ್ಚಾರ್ ವೇಗಿ ವಹಾಬ್ ರಿಯಾಜ್ ನಿವೃತ್ತಿ ಘೋಷಣೆ
ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

ಶ್ರೀಲಂಕಾದ ಬ್ಯಾಟರ್ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ!
ಶ್ರೀಲಂಕಾದ ಕ್ರಿಕೆಟಿಗ ಲಹಿರು ತಿರಿಮನ್ನೆ ಭಾನುವಾರ ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 33 ವರ್ಷದ ಅಗ್ರ ಕ್ರಮಾಂಕದ ಬ್ಯಾಟರ್ ಆಗಿದ್ದ ತಿರಿಮನ್ನೆ ಅವರು 2010 ರಲ್ಲಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಇವರು 44 ಟೆಸ್ಟ್, 127 ಏಕದಿನ ಪಂದ್ಯಗಳು ಮತ್ತು 26 ಟಿ-20 ಪಂದ್ಯಗಳನ್ನಾಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಜಿಂಬಾಬ್ವೆ ತಂಡದ ಬ್ರೆಂಡನ್ ಟೇಲರ್ ನಿವೃತ್ತಿ ಘೋಷಣೆ
ಜಿಂಬಾಬ್ವೆಯ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬ್ರೆಂಡನ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು: ಐಸಿಸಿ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕನಿಷ್ಠ ವಯಸ್ಸಿನ ನೀತಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜಾರಿಗೆ ತಂದಿದೆ. ಈ ನಿಯಮದ ಅನ್ವಯ ಇಂಟರ್‌ನ್ಯಾಷನಲ್ ಕ್ರಿಕೆಟ್ ಆಡಬೇಕಾದರೆ ಆಟಗಾರನಿಗೆ ಕಡ್ಡಾಯವಾಗಿ 15 ವರ್ಷ ವಯಸ್ಸಾಗಿರಬೇಕು.

'ನಿಮ್ಮ ಸಾಧನೆ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ': ಪತಿಯ ಬಗ್ಗೆ ಸಾಕ್ಷಿ ಸಿಂಗ್ ಭಾವನಾತ್ಮಕ ನುಡಿ
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಹಠಾತ್ತನೆ ಹೇಳಿ ಎಂ.ಎಸ್ ಧೋನಿ ಲಕ್ಷಾಂತರ ಅಭಿಮಾನಿಗಳಿಗೆ ಅಚ್ಚರಿ ಮತ್ತು ಬೇಸರ ಮೂಡಿಸಿದ್ದಾರೆ.

