ಅಂತ್ಯ

ನವವೃಂದಾವನ ವಿವಾದ: ದಶಕಗಳ ಸಮಸ್ಯೆ ಸೌಹಾರ್ದಯುತವಾಗಿ ಅಂತ್ಯ!
ಮಂತ್ರಾಲಯದ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ಉತ್ತರಾದಿ ಮಠದ ಪೀಠಾಧಿಪತಿ ಸತ್ಯಾತ್ಮತೀರ್ಥ ಸ್ವಾಮೀಜಿ ಬೆಂಗಳೂರಿನಲ್ಲಿ ಶನಿವಾರ ನಡೆಸಿದ ಸೌಹಾರ್ದ ಸಮಾಗಮ ಕಾರ್ಯಕ್ರಮದಲ್ಲಿ ಒಪ್ಪಂದಕ್ಕೆ ಬಂದರು.

ಪಂಜಾಬ್: ರೈತ ನಾಯಕ ದಲ್ಲೇವಾಲ್ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ!
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಮನವಿ ಮಾಡಿದ ಒಂದು ದಿನದ ನಂತರ ದಲ್ಲೇವಾಲ್ ಈ ಘೋಷಣೆ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಅಂತಿಮ ಹಂತದ ಮತದಾನ: ಬಹಿರಂಗ ಪ್ರಚಾರಕ್ಕೆ ತೆರೆ
ಶನಿವಾರ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಹಾಗೂ ಏಳು ರಾಜ್ಯಗಳು 57 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ 7ನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದಿದೆ.

ಲೋಕಸಭೆ ಚುನಾವಣೆ 2024: ಮೊದಲ ಹಂತದ 102 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಮುಕ್ತಾಯ
ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂಚಿಕೆಯಾಗಿರುವ 102 ಕ್ಷೇತ್ರಗಳಲ್ಲಿ ಪ್ರಚಾರ ಬುಧವಾರ ಮುಕ್ತಾಯಗೊಂಡಿದೆ.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ: ಅನಿರ್ದಾಷ್ಟವಧಿಗೆ ಸದನ ಮುಂದೂಡಿಕೆ
ಕರ್ನಾಟಕ ಎಂದು ಹೆಸರಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ ರಾಜ್ಯದೆಲ್ಲೆಡೆ ಮನೆ ಮಾಡಿದೆ. ಈ ಸಂಭ್ರಮದ ನಡುವೆಯೇ ಜರುಗಿದ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಸದನ ಕಲಾಪಗಳನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರು.

ಮೈಸೂರು ದಸರಾ: ಆಕರ್ಷಕ ಜಂಬೂ ಸವಾರಿ, ಪಂಜಿನ ಕವಾಯತು ನೊಂದಿಗೆ ವರ್ಣರಂಜಿತ ತೆರೆ!
ವಿಜಯದಶಮಿಯ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ, ಆಕರ್ಷಕ ಪಂಜಿನ ಕವಾಯತಿನೊಂದಿಗೆ ಕಳೆದ 10 ದಿನಗಳಿಂದ ನಡೆದ ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ವರ್ಣರಂಜಿತ ತೆರೆ ಬಿದ್ದಿತು.

ಚಕ್ರವರ್ತಿ ಅಣ್ಣನ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ- ಪುನೀತ್ ಕೆರೆಹಳ್ಳಿ
ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಸ್ಪಷ್ಪೀಕರಣ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ; ಕುಸ್ತಿಪಟುಗಳ ಹೋರಾಟ ಅಂತ್ಯ
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‍ಐ) ಅಧ್ಯಕ್ಷ ಬೃಜ್‍ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ ನೀಡುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿ ಶುಕ್ರವಾರ ರಾತ್ರಿ ಅಂತ್ಯಗೊಂಡಿದೆ.

ಉಕ್ರೇನ್ ಜೊತೆಗಿನ ಯುದ್ಧವನ್ನು ಶೀಘ್ರವೇ ನಿಲ್ಲಿಸುತ್ತೇವೆ: ಎಲ್ಲವೂ ಉತ್ತಮ ರೀತಿಯಲ್ಲಿ ಅಂತ್ಯವಾಗಲಿದೆ; ಪುಟಿನ್
ಕಳೆದ 10 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ ಹಾಗೂ ಉಕ್ರೇನ್ ನಡುವಿನ ಭೀಕರ ಯುದ್ಧವನ್ನು ಶೀಘ್ರವೇ ನಿಲ್ಲಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ.

