ಸಿನಿಮಾ ಸುದ್ದಿಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಸ್ಮಾರಕ ಪ್ರತಿಷ್ಠಾನ ಸಮಿತಿ ರಚನೆ
ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕನ್ನಡದ ಮೇರು ನಟರಾದ ಡಾ ರಾಜ್ ಕುಮಾರ್ ಮತ್ತು ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಂತೆಯೇ, ಅಂಬರೀಷ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನಕ್ಕಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.