ಅಕ್ರಮ ಕಟ್ಟಡ

BBMP: ಕೇವಲ ಪ್ರಚಾರಕ್ಕಾಗಿ ಅಕ್ರಮ ಕಟ್ಟಡಗಳಿಗೆ ಸೀಲ್; ದೂರುದಾರರ ಗಂಭೀರ ಆರೋಪ
ನವದೆಹಲಿಯ ಕರ್ನಾಟಕ ಭವನದ ಸಂಪರ್ಕಾಧಿಕಾರಿ ಮಂಜು ಗೌಡ ಅವರು ಎರಡು ವರ್ಷಗಳ ಹಿಂದೆ ಮೂರನೇ ಮಹಡಿಯಲ್ಲಿ ಅಕ್ರಮವಾಗಿ ಮನೆ ನಿರ್ಮಿಸಲು ಪ್ರಾರಂಭಿಸಿದಾಗ ನಾನು ದೂರು ನೀಡಿದ್ದೆ.

BBMP: 402 ಅಕ್ರಮ ಕಟ್ಟಡ ನೆಲಸಮಗೊಳಿಸಲು ಬಿಬಿಎಂಪಿ ಮುಂದು!
ಈ ಪೈಕಿ 117 ಕಟ್ಟಡಗಳು ಕೆಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು 285 ಕಟ್ಟಡಗಳು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿವೆ.

ಬೆಂಗಳೂರು: ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ BDA-ಪೊಲೀಸರ ನಡುವೆ ಜಟಾಪಟಿ..!
ಕಟ್ಟಡ ತೆರವುಗೊಳಿಸಲು ಬಿಡಿಎ ಮುಂದಾಗುತ್ತಿದ್ದಂತೆಯೇ ಕುಟುಂಬಸ್ಥರು ಪೊಲೀಸರಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಮನವರಿಕೆ ಮಾಡಿಕೊಟ್ಟರು. ಬಳಿಕ ಪೊಲೀಸರು ಬಿಡಿಎ ಅಧಿಕಾರಿಗಳನ್ನು ತಡೆಹಿಡಿದರು.

ಗುಜರಾತ್: ಸೋಮನಾಥ ದೇವಾಲಯ ಬಳಿ ಅಕ್ರಮ ಮಸೀದಿ, ದರ್ಗಾ, ವಸತಿ ಕಟ್ಟಡಗಳ ಧ್ವಂಸ!
ಈ ವೇಳೆ 36 ಜೆಸಿಬಿಗಳು, 70 ಟ್ರ್ಯಾಕ್ಟರ್‌ಗಳು, 5 ಹಿಟಾಚಿ ಯಂತ್ರಗಳು, 10 ಡಂಪರ್‌ಗಳು ಮತ್ತು 1,400 ಪೊಲೀಸರನ್ನು ನಿಯೋಜಿಸಲಾಗಿತ್ತು

ಶಿವರಾಮ ಕಾರಂತ ಬಡಾವಣೆ: ನಾಯಿಕೊಡೆಗಳಂತೆ ತಲೆಎತ್ತುತ್ತಿರುವ ಅಕ್ರಮ ಕಟ್ಟಡಗಳು; BDA ಗೆ ತಂದಿದೆ ತಲೆನೋವು..!
15 ದಿನಗಳ ಹಿಂದೆ ಶ್ಯಾಮರಾಜಪುರ ಗ್ರಾಮದಲ್ಲಿ ಎರಡು ಅಂತಸ್ತಿನ ಅರ್ಧ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು. ಆಗಾಗ್ಗೆ ಇಂತಹ ಕಾರ್ಯಾಚರಣೆ ನಡೆಸುತ್ತಲೇ ಇರುತ್ತೇವೆ. ಆದರೂ, ಸ್ವಲ್ಪ ಸಮಯದ ನಂತರ, ಅದೇ ಸ್ಥಳದಲ್ಲಿ ಮತ್ತೊಂದು ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ.

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಾಣಕ್ಕೆ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಹೈಕೋರ್ಟ್ ಅನುಮತಿ
ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ ಬರುವ ಕುಂದುಕರೆ ವ್ಯಾಪ್ತಿಯ ಜಕ್ಕಳಿ ಗ್ರಾಮದಲ್ಲಿನ 1.24 ಎಕರೆ ಇರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಟ ಗಣೇಶ್ ಅವರಿಗೆ ಹೈಕೋರ್ಟ್ ಅನುಮತಿ ನೀಡಿದ್ದು, ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶಿಸಿದೆ.

ಅನಧಿಕೃತ ಕಟ್ಟಡಗಳ ತೆರವಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ: ಬಿಬಿಎಂಪಿ
ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಒತ್ತುವರಿ ಮಾಡಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಹೇಳಿದ್ದಾರೆ.

30 ಕೋಟಿ ರೂ. ಮೌಲ್ಯದ ಭೂಮಿ ಬಿಡಿಎ ವಶಕ್ಕೆ
ಸರ್ಕಾರಿ ಭೂಮಿ ಒತ್ತುವರಿ ತೆರೆವು ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಂಗಳವಾರ ಬೆಳಿಗ್ಗೆ 30 ಕೋಟಿ ರೂ. ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆದಿದೆ.

ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ: ಬಿಡಿಎಗೆ ಹೈಕೋರ್ಟ್ ಸೂಚನೆ
ಬೆಂಗಳೂರು ಉತ್ತರ ತಾಲ್ಲೂಕಿನ ವೈಯಾಲಿಕಾವಲ್ ಹೌಸ್ ಬಿಲ್ಡಿಂಗ್ ಕೋಆಪರೇಟಿವ್ ಸೊಸೈಟಿಯ ಖಾಸಗಿ ಲೇಔಟ್‌ನಲ್ಲಿ ಒಂದು ಎಕರೆ ವಿಸ್ತೀರ್ಣದ ನಾಗರೀಕ ಸೌಕರ್ಯದ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ನಿರ್ದೇಶನ ನೀಡಿದೆ.

