ರಾಜ್ಯಅಗ್ರಿ ಅಥವಾ ಕೃಷಿ ಪ್ರಧಾನ ಟೂರಿಸಂ ಪ್ರಾರಂಭಿಸಲು ಕ್ರಮ: ಸಿ.ಟಿ. ರವಿ
ಕೋವಿಡ್-19 ಸಂಕಷ್ಟದಿಂದ ಅತ್ಯಂತ ಹೆಚ್ಚು ನಷ್ಟಕ್ಕೆ ಒಳಗಾಗಿರುವ ಪ್ರವಾಸೋದ್ಯಮವನ್ನು ಬಲಪಡಿಸುವ ನಿಟ್ಟಿನಲ್ಲಿ ಕೃಷಿ ಹಾಗೂ ಗ್ರಾಮೀಣ ಸಂಸ್ಕಂತಿ ಒಳಗೊಂಡ ಅಗ್ರಿ ಟೂರಿಸಂ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಕ್ರೀಡಾ ಸಚಿವ ಸಿ.ಟಿ.ರವಿ ಹೇಳಿದ್ದಾರೆ.