ಅತೀಕ್ ಅಹ್ಮದ್

ಭೀಕರ ರಸ್ತೆ ಅಪಘಾತ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರ ಸಾವು; ಜೈಲಿನಲ್ಲಿದ್ದ ಸಹೋದರನ ಭೇಟಿ ಮಾಡಿ ಬರುವಾಗ ದುರಂತ!
ಅಬಾನ್ ಹಾಗೂ ಅವರ ಸಹಚರರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

"ನನ್ನನ್ನು ಹತ್ಯೆ ಮಾಡಿದರೆ...": ಅತೀಕ್ ಅಹ್ಮದ್ ಪತ್ರ ಮುಚ್ಚಿದ ಲಕೋಟೆಯಲ್ಲಿ ಯುಪಿ ಸಿಎಂ, ಸಿಜೆಐ ಗೆ ರವಾನೆ
ಜೀವಕ್ಕೆ ಅಪಾಯ ಎದುರಾಗುವ ಆತಂಕ ಎದುರಿಸುತ್ತಿದ್ದ ಉತ್ತರ ಪ್ರದೇಶದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಮುಂದೊಂದು ದಿನ ತನಗೆ ಎದುರಾಗಬಹುದಾದ ಪರಿಸ್ಥಿಯ ಬಗ್ಗೆ ಬರೆದ ಪತ್ರವನ್ನು ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸಿಜೆಐ ಗೆ ಮುಚ್ಚಿದ ಲಕೋಟೆಯಲ್ಲಿ ಕಳಿಸಲಾಗುತ್ತಿದೆ.

ಉಮೇಶ್ ಪಾಲ್ ಹತ್ಯೆ ಪ್ರಕರಣ: ಅತೀಕ್ ಅಹ್ಮದ್ ಪರ ವಕೀಲರ ಬಂಧನ
ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಅತೀಕ್ -ಅಶ್ರಫ್ ಸಹೋದರರ ಹತ್ಯೆ ನಂತರ ಕೈಗೊಂಡ ಕ್ರಮಗಳ ವರದಿ ಸಲ್ಲಿಸಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಪಾತಕಿ, ಮಾಜಿ ಸಂಸದ ಅತೀಕ್ ಅಹಮದ್ ಮತ್ತು ಆತನ ತಮ್ಮ ಅಶ್ರಫ್ ಹತ್ಯೆ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.

ಅತೀಕ್, ಅಶ್ರಫ್ ಹತ್ಯೆ ಕೇಸಿನ ಬಗ್ಗೆ ಸ್ವತಂತ್ರ ತನಿಖೆ ಕೋರಿ ಅರ್ಜಿ: ಏಪ್ರಿಲ್ 28ರಂದು ಸುಪ್ರೀಂ ಕೋರ್ಟ್ ವಿಚಾರಣೆ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಖ್ಯಾತ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆ ಪ್ರಕರಣದ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಮನವಿಯನ್ನು ಏಪ್ರಿಲ್ 28 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ಗ್ಯಾಂಗ್ ಸ್ಟರ್ ಅತಿಕ್ ಹತ್ಯೆ: ಯುಪಿ ಪೊಲೀಸರಿಗೆ ಎನ್ ಎಚ್ ಆರ್ ಸಿ ನೋಟಿಸ್ ಜಾರಿ
ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅತೀಕ್ ಅಹ್ಮದ್ ವಕೀಲರ ಮನೆ ಮೇಲೆ ಬಾಂಬ್ ದಾಳಿ!
ಇತ್ತೀಚೆಗೆ ಗುಂಡೇಟಿಗೆ ಬಲಿಯಾಗಿದ್ದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ವಕೀಲರ ಮನೆ ಮೇಲೆ ಏ.18 ರಂದು ಬಾಂಬ್ ದಾಳಿ ನಡೆದಿದೆ.

'ನಾನು ಬೀದಿ ಹೆಣವಾಗುತ್ತೇನೆ, ಎನ್‌ಕೌಂಟರ್ ಮಾಡುತ್ತಾರೆ': ಅತೀಕ್ ಹೇಳಿದ ಮಾತು ಈಗ ನಿಜವಾಯಿತು
ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಅವರು 2004ರಲ್ಲಿ ಚುನಾವಣಾ ರ್ಯಾಲಿಯಲ್ಲಿ ಸಾಂದರ್ಭಿಕವಾಗಿ ಹೇಳಿದ ಮಾತುಗಳು ಶನಿವಾರ ರಾತ್ರಿ ನಿಜವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

'ಜಂಗಲ್ ರಾಜ್', 'ಮಾಫಿಯಾ ರಾಜ್', ಅರಾಜಕತೆ: ಅತೀಕ್ ಅಹ್ಮದ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಹತ್ಯೆಯ ಕುರಿತು ವಿರೋಧ ಪಕ್ಷ ಕಾಂಗ್ರೆಸ್ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದರ ಆಡಳಿತದಲ್ಲಿ 'ಜಂಗಲ್ ರಾಜ್' ಮತ್ತು 'ಮಾಫಿಯಾ ರಾಜ್' ಪ್ರಚಲಿತದಲ್ಲಿದೆ ಎಂದು ಆರೋಪಿಸಿದೆ.

