ದೇಶವಂಚಕ ಸುಕೇಶ್ ಚಂದ್ರಶೇಖರ್ ಜೈಲು ಕೋಣೆಯಿಂದ 1.5 ಲಕ್ಷ ಮೌಲ್ಯದ ಚಪ್ಪಲಿ, 80 ಸಾವಿರ ಮೌಲ್ಯದ ಜೀನ್ಸ್ ವಶ
ದೆಹಲಿ ಕಾರಾಗೃಹ ಇಲಾಖೆಯು ಮಂಡೋಲಿ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ ಅವರ ಸೆಲ್ ಮೇಲೆ ದಾಳಿ ನಡೆಸಿತು. ದಾಳಿಯಲ್ಲಿ 1.5 ಲಕ್ಷ ರೂಪಾಯಿ ಮೌಲ್ಯದ ಗುಸ್ಸಿ (Gucci) ಚಪ್ಪಲಿ ಮತ್ತು 80,000 ರೂಪಾಯಿ ಮೌಲ್ಯದ ಎರಡು ಜೀನ್ಸ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.